ಬೆಂಗಳೂರು: ಮಹಾತ್ಮ ಗಾಂಧಿ ರಸ್ತೆಯ ಅನಿಲ್ ಕುಂಬ್ಳೆ ವೃತ್ತದಲ್ಲಿ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. 50 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ. ಮೃತದೇಹವನ್ನು ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಮೃತ ವ್ಯಕ್ತಿಯ ಸಂಬಂಧಿಕರನ್ನು ಪತ್ತೆಹಚ್ಚುವ ಕೆಲಸ ನಡೆಯುತ್ತಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ಅನಿಲ್ ಕುಂಬ್ಳೆ ವೃತ್ತದಲ್ಲಿ ವ್ಯಕ್ತಿಯೊಬ್ಬರು ಶುಕ್ರವಾರ ಮುಂಜಾನೆ 4.30ರ ಸುಮಾರಿಗೆ ರಸ್ತೆ ದಾಟುತ್ತಿದ್ದರು. ಕಬ್ಬನ್ ರಸ್ತೆ ಕಡೆಯಿಂದ ವೇಗವಾಗಿ ಬಂದ ವಾಹನವೊಂದು ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ವಾಹನವನ್ನು ನಿಲುಗಡೆ ಮಾಡದೇ ತೆರಳಿದ್ದಾನೆ. ಜಂಕ್ಷನ್ನಲ್ಲಿ ಅಳವಡಿಸಿರುವ ಹಾಗೂ ವಾಣಿಜ್ಯ ಕಟ್ಟಡಗಳಲ್ಲಿ ಇರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಾವಳಿ ಪರಿಶೀಲನೆ ನಡೆಸಲಾಗುತ್ತಿದೆ. ವಾಹನದ ನೋಂದಣಿ ಸಂಖ್ಯೆ ಪತ್ತೆ ಆಗಿದೆ. ಅದನ್ನು ಆಧರಿಸಿ ಚಾಲಕನನ್ನು ಪತ್ತೆ ಹಚ್ಚಲಾಗುವುದು ಎಂದು ಸಂಚಾರ ಪೊಲೀಸರು ಹೇಳಿದರು.

ಕಬ್ಬನ್ಪಾರ್ಕ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಶ್ಚಿಮ ವಿಭಾಗದ (ಸಂಚಾರ) ಡಿಸಿಪಿ ಅನೂಪ್ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-4-790343896

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.