ಬೆಂಗಳೂರು: ‘ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳ ಆದೇಶದಿಂದಾಗಿ ಭವಿಷ್ಯದಲ್ಲಿ ರಾಜ್ಯದಲ್ಲಿನ ಆಸ್ಪತ್ರೆಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ಸಾವಿರಾರು ಕೈಗಾರಿಕೆಗಳ ಲಕ್ಷಾಂತರ ಕಾರ್ಮಿಕರಿಗೆ ಸಮಸ್ಯೆ ಎದುರಾಗಲಿದೆ’ ಎಂದು ‘ಕರ್ನಾಟಕ ಉದ್ಯೋಗಿಗಳ ಸಂಘ’ ಹೈಕೋರ್ಟ್ಗೆ ತನ್ನ ಆತಂಕ ಅರುಹಿದೆ.

ಕನಿಷ್ಠ ವೇತನ ಪರಿಷ್ಕರಣೆ ಅಧಿಸೂಚನೆ ಪ್ರಶ್ನಿಸಿ, ‘ಕರ್ನಾಟಕ ಎಂಪ್ಲಾಯರ್ಸ್ ಅಸೋಸಿಯೇಶನ್’ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಭಟ್ ಮತ್ತು ‘ಎಥೆರಲ್ ಮಷಿನ್ಸ್ ಪ್ರೈವೆಟ್ ಲಿಮಿಟೆಡ್’ ಕಂಪನಿಯ ಪ್ರಧಾನ ವ್ಯವಸ್ಥಾಪಕ ಎಂ.ಆರ್.ನಟರಾಜ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಪದಾಂಕಿತ ಹಿರಿಯ ವಕೀಲ ಎಸ್.ಎಸ್.ನಾಗಾನಂದ ಅವರು, ‘ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟದಲ್ಲಿ; ಕನಿಷ್ಠ ವೇತನವನ್ನು ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ನಿಗದಿ ಮಾಡಲಾಗಿದೆ. ಇದರಿಂದ ನರ್ಸಿಂಗ್ ಹೋಮ್, ಕಾಲೇಜುಗಳನ್ನು ಮುಚ್ಚಬೇಕಾಗುತ್ತದೆ’ ಎಂದು ಕಳವಳ ವ್ಯಕ್ತಪಡಿಸಿದರು.

ಅಖಿಲ ಭಾರತ ಟ್ರೇಡ್ ಯೂನಿಯನ್ಗಳ ಕೇಂದ್ರೀಯ ಒಕ್ಕೂಟದ ಪರ ವಾದ ಮಂಡಿಸಿದ ಪದಾಂಕಿತ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ ಅವರು, ‘2017ರಲ್ಲಿ ಕೊನೆಯ ಬಾರಿಗೆ ವೇತನ ಪರಿಷ್ಕರಣೆ ಮಾಡಲಾಗಿದೆ. ಸದ್ಯ ಜಾಗತಿಕ ವಿದ್ಯಮಾನಗಳನ್ನು ಗಮನಿಸಿದಾಗ ಹಲವು ದೇಶಗಳಲ್ಲಿ ಯುದ್ಧ ನಡೆಯುತ್ತಿದೆ. ಇದರಿಂದ ದೈನಂದಿನ ಬಳಕೆಯ ವಸ್ತುಗಳ ಬೆಲೆ ಹೆಚ್ಚಾಗಿದೆ. ಇಂತಹ ಪರಿಸ್ಥಿತಿಯಲ್ಲೂ ಕಾರ್ಮಿಕರಿಗೆ ಹಳೆಯ ವೇತನವನ್ನೇ ಪಾವತಿಸಬೇಕೆ’ ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ಅವರು ಆಕ್ಷೇಪಣೆ ಸಲ್ಲಿಸಲು ಒಂದು ವಾರ ಕಾಲಾವಕಾಶ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿವಾದಿಯನ್ನಾಗಿ ಸೇರ್ಪಡೆ ಮಾಡುವಂತೆ ನಿರ್ದೇಶಿಸಿ ವಿಚಾರಣೆಯನ್ನು ಜೂನ್ 9ಕ್ಕೆ ಮುಂದೂಡಿತು.

ಆಕ್ಷೇಪ: ‘ನ್ಯಾಯಾಲಯದ ಅನುಮತಿ ಇಲ್ಲದೇ ಸಲಹಾ ಮಂಡಳಿಯ ಶಿಫಾರಸುಗಳನ್ನು ಜಾರಿಗೊಳಿಸಬಾರದು ಎಂದು ಈಗಾಗಲೇ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ. ಆದರೂ ರಾಜ್ಯ ಸರ್ಕಾರ 2026 ಮೇ 22ರಂದು ಆಕ್ಷೇಪಾರ್ಹ ಅಂತಿಮ ಅಧಿಸೂಚನೆ ಹೊರಡಿಸಿದೆ. ವೇತನ ಪರಿಷ್ಕರಣೆಗೆ ಅಳವಡಿಸಿರುವ ನಿಯಮಗಳು, ಕನಿಷ್ಠ ವೇತನ ಕಾಯ್ದೆ ಹಾಗೂ ಸುಪ್ರೀಂ ಕೋರ್ಟ್ ರೂಪಿಸಿರುವ ಮಾನದಂಡಗಳಿಗೆ ಪೂರಕವಾಗಿಲ್ಲ ಎಂಬುದು ಅರ್ಜಿದಾರರ ಆಕ್ಷೇಪ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-51-1765278525

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.