ಬೆಂಗಳೂರು: ಜೂನ್ನಲ್ಲಿ ಮುಂಗಾರು ಆರಂಭವಾಗುವುದಕ್ಕೂ ಮುನ್ನ ಎಲ್ಲರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚಿಸಿದರು.

ಎಲ್ಲ ಮುಖ್ಯ, ಉಪ ಮುಖ್ಯರಸ್ತೆ ಮತ್ತು ಇತರೇ ಪ್ರಮುಖ ರಸ್ತೆಗಳಲ್ಲಿ ಮಳೆ ನೀರು ಚರಂಡಿ ಹೂಳು ತಗೆಯುವುದು, ಶೋಲ್ಡರ್ ಡ್ರೈನ್ಸ್ ಹಾಗೂ ಗ್ರೇಟಿಂಗ್ಸ್ ಸ್ವಚ್ಛತೆಯನ್ನು ಖಾತರಿಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ತಂಡಗಳನ್ನು ರಚಿಸಿ, ರಸ್ತೆಗಳಲ್ಲಿನ ಮಳೆ ನೀರು ಚರಂಡಿಗಳಲ್ಲಿ ಸರಾಗವಾಗಿ ಹರಿಯಲು ಅವಕಾಶವಿದೆಯೇ ಅಥವಾ ಹೂಳು ತುಂಬಿದೆಯೇ ಎಂಬುದನ್ನು ಪರಿಶೀಲಿಸಿ, ಕ್ರಮ ವಹಿಸಲು ಸೂಚಿಸಬೇಕು. ರಾಜಕಾಲುವೆಗಳಲ್ಲಿ ಹೂಳುತೆಗೆದಿರುವುದನ್ನು ಖಾತರಿಪಡಿಸಿಕೊಳ್ಳಬೇಕು. ಈ ಬಗ್ಗೆ ಕೈಗೊಂಡಿರುವ ಕ್ರಮಗಳ ಕುರಿತು ಮೇ 8ರೊಳಗೆ ಚಿತ್ರ ಸಹಿತವರದಿ ನೀಡಬೇಕು ಎಂದರು.

ಮರ ತೆರವಿಗೆ ಸೂಚನೆ: ಏ. 29ರಂದು ಆಲಿಕಲ್ಲು ಸಹಿತ ಸುರಿದ ಭಾರಿ ಮಳೆಗೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮರಗಳು, ರೆಂಬೆ-ಕೊಂಬೆಗಳು ಬಿದ್ದು ಸಾರ್ವಜನಿಕರ ಸಂಚಾರಕ್ಕೆ ಸಾಕಷ್ಟು ಅಡಚಣೆಯಾಗಿದೆ. ಪಾಲಿಕೆಯ ಅರಣ್ಯ ಘಟಕದ ವತಿಯಿಂದ ಮಳೆ-ಗಾಳಿಗೆ ಬಿದ್ದ ಮರ ಹಾಗೂ ರೆಂಬೆಗಳನ್ನು ತೆರವುಗೊಳಿಸಲು ಅಭಿವೃದ್ಧಿಯ ಹೆಚ್ಚುವರಿ ಆಯುಕ್ತ ದಲ್ಜಿತ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-4-1974233833

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.