ಬೆಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ಪುತ್ರಿಯನ್ನು ಕೊಲೆ ಮಾಡಿ ತಾಯಿಯೂ ಆತ್ಮಹತ್ಯೆಗೆ ಯತ್ನಿಸಿದ್ದು, ಈ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೃತಿಕಾ(6) ಮೃತಪಟ್ಟಿದ್ದು, ತಾಯಿ ನಿರುತಾ(30) ಅವರ ಸ್ಥಿತಿ ಗಂಭೀರವಾಗಿದೆ. ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.

ನೇಪಾಳದ ನಿರುತಾ ಹಾಗೂ ಕಿಶನ್ ದಂಪತಿ ಕೆಲವು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ಕಿಶನ್ ಅವರು ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು.

ನಿರುತಾ ಅವರು ಸದಾ ಮೊಬೈಲ್ನಲ್ಲಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿ ಕಿಶನ್ ಅವರು ಗಲಾಟೆ ಮಾಡುತ್ತಿದ್ದರು. ಬೇರೆಯವರ ಜತೆಗೆ ಸ್ನೇಹವಿದೆ ಎಂದೂ ಹೇಳುತ್ತಿದ್ದರು. ಜ.5ರಂದು ಪತಿ ಕೆಲಸಕ್ಕೆ ತೆರಳಿದ್ದ ವೇಳೆ ನಿರುತಾ ಅವರು ಪುತ್ರಿಗೆ ನೇಣುಹಾಕಿ ಕೊಲೆ ಮಾಡಿದ್ದರು. ನಂತರ ಅವರೂ ಆತ್ಮಹತ್ಯೆಗೆ ಯತ್ನಿಸಿದ್ದರು. ಕಿಶನ್ ಅವರು ಕೆಲಸದಿಂದ ವಾಪಸ್ ಬಂದು ನೋಡಿದಾಗ ಮಗಳು ಮೃತಪಟ್ಟಿದ್ದಳು. ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸರು ಹೇಳಿದರು.

ಪ್ರಕರಣ ದಾಖಲಿಸಿಕೊಂಡಿರುವ ಹೆಣ್ಣೂರು ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.