ಬೆಂಗಳೂರು: ರೇಡಿಯೊ ಜಾಕಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮುಂಬೈನ ಮನೀಷಾ ಪ್ರಸಾದ್ (48) ಆತ್ಮಹತ್ಯೆ ಮಾಡಿಕೊಂಡವರು.

ಮೇ 23ರಂದು ಮಾನ್ಯತಾ ಟೆಕ್ ಪಾರ್ಕ್ ಆವರಣದ ಅಪಾರ್ಟ್ಮೆಂಟ್ನ ಫ್ಲ್ಯಾಟ್ನಲ್ಲಿ ಘಟನೆ ನಡೆದಿದೆ. ಮನೀಷಾ ಪ್ರಸಾದ್ ಅವರ ಪ್ರಿಯಕರ ಹರ್ಷವರ್ಧನ್ ಸಿಂಗ್ ಬನ್ಸಾಲ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದರು.

ಮುಂಬೈನಲ್ಲಿ ರೇಡಿಯೊ ಜಾಕಿಯಾಗಿದ್ದ ಮನೀಷಾ, ಕೌಟುಂಬಿಕ ವಿಚಾರಕ್ಕೆ 2024ರಲ್ಲಿ ಪತಿಯಿಂದ ವಿಚ್ಛೇದನ ಪಡೆದಿದ್ದರು. ನಂತರ, ಕಳೆದ ಏಪ್ರಿಲ್ನಲ್ಲಿ ನಗರಕ್ಕೆ ಆಗಮಿಸಿದ್ದರು. ಮಾನ್ಯತಾ ಟೆಕ್ ಪಾರ್ಕ್ ಬಳಿ ಹೊಸದಾಗಿ ಫ್ಲ್ಯಾಟ್ ಖರೀದಿಸಿ ಒಂಟಿಯಾಗಿ ವಾಸಿಸುತ್ತಿದ್ದರು. ಸಂಬಂಧಿಕರು ಕರೆ ಮಾಡಿದರೂ ಸ್ವೀಕರಿಸದ ಹಿನ್ನೆಲೆಯಲ್ಲಿ ಮನೆಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

ಪತಿಯಿಂದ ವಿಚ್ಛೇದನ ಪಡೆದುಕೊಂಡ ಬಳಿಕ ಮುಂಬೈನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಿಮಾಚಲ ಪ್ರದೇಶದ ಹರ್ಷವರ್ಧನ್ ಸಿಂಗ್ ಅವರನ್ನು ಪ್ರೀತಿಸುತ್ತಿದ್ದರು. ಬಳಿಕ ಇಬ್ಬರೂ ಸಹ ಜೀವನ ನಡೆಸುತ್ತಿದ್ದರು. ಆದರೆ, ಕಿರುಕುಳ ಹಾಗೂ ಹಿಂಸೆ ತಾಳಲಾರದೆ ಮನೀಷಾ ಕೆಲವು ದಿನಗಳ ಹಿಂದಷ್ಟೇ ನಗರಕ್ಕೆ ಬಂದು ಮಾನ್ಯತಾ ಟೆಕ್ ಪಾರ್ಕ್ ಆವರಣದಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಫ್ಲ್ಯಾಟ್ ಖರೀದಿಸಿದ್ದರು ಎಂದು ಮೂಲಗಳು ಹೇಳಿವೆ.

ಆತ್ಮಹತ್ಯೆಗೂ ಮುನ್ನ ಮನೀಷಾ ಅವರು ಮೂರು ಪುಟಗಳ ಮರಣಪತ್ರ ಬರೆದಿಟ್ಟಿದ್ದಾರೆ. ಅದರಲ್ಲಿ ತಮ್ಮ ಸಾವಿಗೆ ಹಿಮಾಚಲ ಪ್ರದೇಶದ ಹರ್ಷವರ್ಧನ್ ಸಿಂಗ್ ಬನ್ಸಾಲ್ ಕಾರಣ ಎಂದು ಉಲ್ಲೇಖಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅಮೃತಹಳ್ಳಿ ಠಾಣೆ ಪೊಲೀಸರು ಪರಿಶೀಲಿಸಿ, ಮರಣ ಪತ್ರ ಹಾಗೂ ಮನೀಷಾ ಅವರ ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ. ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-4-1154805686

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.