ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ಯದ ಪಾರ್ಟಿ: ಹೋಟೆಲ್ ಕೆಲಸಗಾರನ ಕೊಲೆ

Published 23 ಫೆಬ್ರುವರಿ 2024, 15:20 IST
Last Updated 23 ಫೆಬ್ರುವರಿ 2024, 15:20 IST
ಅಕ್ಷರ ಗಾತ್ರ

ಬೆಂಗಳೂರು: ಬೇಗೂರು ಠಾಣೆ ವ್ಯಾಪ್ತಿಯಲ್ಲಿ ಆನಂದ್(30) ಎಂಬುವವರನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಲಾಗಿದ್ದು, ಕೃತ್ಯ ಎಸಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಮಂಡ್ಯದ ಆನಂದ್, ನಗರದ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಬುಧವಾರ ರಾತ್ರಿ ಅವರ ಕೊಲೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

‘ಆನಂದ್ ಹಾಗೂ ಆರೋಪಿಗಳು, ಮದ್ಯದ ಪಾರ್ಟಿ ಮಾಡಲೆಂದು ಹುಳಿಮಾವು ಬಳಿಯ ನಿರ್ಜನ ಪ್ರದೇಶಕ್ಕೆ ಹೋಗಿದ್ದರು. ಮೂವರು ಮದ್ಯ ಕುಡಿದಿದ್ದರು. ಕ್ಷುಲ್ಲಕ ಕಾರಣಕ್ಕಾಗಿ ಆನಂದ್ ಹಾಗೂ ಆರೋಪಿಗಳ ನಡುವೆ ಜಗಳ ಶುರುವಾಗಿತ್ತು.’

‘ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಆರೋಪಿಗಳು, ಆನಂದ್ ಅವರಿಗೆ ದೊಣ್ಣೆಯಿಂದ ಹೊಡೆದಿದ್ದರು. ತೀವ್ರ ಗಾಯಗೊಂಡು ಆನಂದ್ ಮೃತಪಟ್ಟಿದ್ದಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT