ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ: ದ್ವಿಚಕ್ರ ವಾಹನಗಳ ನಿರ್ಬಂಧಕ್ಕೆ ಪರಿಶೀಲನೆ

Published 6 ಜುಲೈ 2023, 7:30 IST
Last Updated 6 ಜುಲೈ 2023, 7:30 IST
ಅಕ್ಷರ ಗಾತ್ರ

ಬೆಂಗಳೂರು: ‘ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು ನಿರ್ಬಂಧಿಸುವ ಪ್ರಸ್ತಾವ ಕುರಿತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಪರಿಶೀಲನೆ ನಡೆಸುತ್ತಿದೆ’ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಬುಧವಾರ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಅತಿಯಾದ ವೇಗದಿಂದ ಈ ಹೆದ್ದಾರಿಯಲ್ಲಿ ಅಪಘಾತಗಳು ಸಂಭವಿಸುತ್ತಿವೆ. ಲೇನ್‌ ಶಿಸ್ತಿನ ಕೊರತೆ ಮತ್ತು ನಿಗದಿತ ವೇಗದ ಮಿತಿಯಾದ ಪ್ರತಿ ಗಂಟೆಗೆ 100 ಕಿ.ಮೀ. ಮೀರುವ ವಾಹನಗಳು ಅಪಘಾತಕ್ಕೆ ಪ್ರಮುಖ ಕಾರಣವಾಗಿವೆ. ವಾಹನ ಸವಾರರಿಗೆ ವೇಗದ ಮಿತಿ ಬಗ್ಗೆ ಅರಿವು ಮೂಡಿಸುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ವಿವರಿಸಿದರು.

‘ಈ ರಸ್ತೆ ವೈಜ್ಞಾನಿಕವಾಗಿ ನಿರ್ಮಿಸಿಲ್ಲ. ಹೆದ್ದಾರಿಯಲ್ಲಿನ ಸಮಸ್ಯೆಗಳ ಕುರಿತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ(ಎನ್‌ಎಚ್‌ಎಐ) ಅಧಿಕಾರಿಗಳ ಜತೆ ಚರ್ಚಿಸಲಾಗುವುದು’ ಎಂದರು.

ಮರಿತಿಬ್ಬೇಗೌಡ ಮಾತನಾಡಿ, ‘ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್‌ ವೇ ರಾಷ್ಟ್ರೀಯ ಹೆದ್ದಾರಿ ಅಲ್ಲ, ಸಾವಿನ ದಾರಿಯಾಗಿದೆ. ಕೇವಲ ಆರು ತಿಂಗಳಲ್ಲಿ 512 ಅಪಘಾತಗಳು ಸಂಭವಿಸಿವೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ಪ್ರತಿ ನಿತ್ಯ ಅಪಘಾತಗಳು ಸಂಭವಿಸುತ್ತಿದ್ದರೂ ನಿಯಂತ್ರಣಕ್ಕೆ ಕ್ರಮಕೈಗೊಂಡಿಲ್ಲ. ಹೆದ್ದಾರಿಯಲ್ಲಿ ಕಳ್ಳತನಗಳು ನಡೆಯುತ್ತಿವೆ. ಹೀಗಾಗಿ, ಹೆದ್ದಾರಿಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT