ಬೆಂಗಳೂರು: ‘ಬೆಂಗಳೂರು– ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣದ ಹಲವೆಡೆ ನೀಡಲಾಗಿದ್ದ ಪ್ರವೇಶ ಮತ್ತು ನಿರ್ಗಮನ ಮಾರ್ಗಗಳನ್ನು ಮುಚ್ಚಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ ದಿನೇಶ್ ಗೂಳಿಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಬೆಂಗಳೂರಿನಿಂದ ಮೈಸೂರು ಕಡೆಗೆ ಸಂಚರಿಸುತ್ತಿರುವ ಭಾರಿ ವಾಹನಗಳು ತೂಬಿನಕೆರೆ ಬಳಿ ಟೋಲ್ ಪ್ಲಾಜಾ ತಪ್ಪಿಸುವ ಮಾಡುವ ಉದ್ದೇಶದಿಂದ ಸರ್ವಿಸ್ ರಸ್ತೆಯಲ್ಲಿ ನಿರ್ಗಮಿಸುತ್ತಿದ್ದವು. ಇಲ್ಲಿನ ಪಕ್ಕದ ಹಳ್ಳಿಗರು, ಸ್ಥಳೀಯ ಸಂಚಾರ ಮತ್ತು ದ್ವಿಚಕ್ರ ವಾಹನಗಳು ಸಂಚರಿಸುತ್ತಿದ್ದರಿಂದ ವಾಹನಗಳ ದಟ್ಟಣೆಯಿಂದ ಸರ್ವೀಸ್ ರಸ್ತೆಯಲ್ಲಿ ಅಪಘಾತಗಳು ಆಗುತ್ತಿದ್ದವು. ಇದನ್ನು ತಪ್ಪಿಸುವ ಉದ್ದೇಶದಿಂದ ಭಾರಿ ವಾಹನಗಳ ನಿರ್ಗಮನ ನಿರ್ಬಂಧಿಸಲಾಗಿದೆ’ ಎಂದರು.

‘ಇತರೆ ಎಲ್ಲ ಸ್ವರೂಪದ ವಾಹನಗಳಿಗೆ ನಿರ್ಗಮನದ ಅವಕಾಶ ಕಲ್ಪಿಸಲಾಗಿದೆ. ಪಾಂಡವಪುರ ಒಳಗೊಂಡಂತೆ ಪಕ್ಕದ ಹಳ್ಳಿಗಳನ್ನು ತಲುಪಲು ಸೇವಾ ರಸ್ತೆಗೆ ಪ್ರವೇಶಿಸಲು ಮತ್ತು ನಿರ್ಗಮಿಸಲು ಅನುಮತಿ ನೀಡಲಾಗಿದೆ’ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.