ಮದ್ದೂರು: ನಿಡಘಟ್ಟ ಸಮೀಪದ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಗುರುವಾರ ಸಂಜೆ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶ್ರೀರಂಗಪಟ್ಟಣ ತಾಲ್ಲೂಕಿನ ಹೊಸಹಳ್ಳಿ ಗ್ರಾಮದ ರಂಜಿತಾ ಎಂಬುವರು ಬೆಂಗಳೂರಿನ ತಾಯಿ ಮನೆಗೆ ಕಾರಿನಲ್ಲಿ ಹೋಗಿ, ಗುರುವಾರ ಸಂಜೆ 5 ಗಂಟೆ ಸುಮಾರಿಗೆ ವಾಪಸ್ ಶ್ರೀರಂಗಪಟ್ಟಣಕ್ಕೆ ಕಾರಿನಲ್ಲಿ ಹಿಂತಿರುಗುವ ವೇಳೆ ಇದ್ದಕ್ಕಿದಂತೆ ಬೆಂಕಿ ಕಾಣಿಸಿಕೊಂಡಿದೆ.

ಈ ವೇಳೆ ಕಾರಿನ ಚಾಲಕ ಕಿರಣ್ ಅವರು ತಕ್ಷಣ ಕಾರಿನಿಂದ ಇಳಿದು ರಂಜಿತಾ ಅವರನ್ನು ಕಾರಿನಿಂದ ಕೆಳಗಿಳಿಸಿದ್ದರಿಂದ ಅನಾಹುತ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ನಗರದ ಸಂಚಾರ ಪಿಎಸ್ಐ ರಂಗಸ್ವಾಮಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗವಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.