ಬೆಂಗಳೂರು: ನಗ್ನವಾಗಿ ಬಂದ ವ್ಯಕ್ತಿಯೊಬ್ಬ ಮಹಿಳೆಯರಿದ್ದ ಮನೆಯೊಂದರ ಬಾಗಿಲು ಬಡಿದು ಒಳಗೆ ನುಗ್ಗಲು ಯತ್ನಿಸಿದ ಘಟನೆ ಬೆಂಗಳೂರು ಪೂರ್ವ ತಾಲ್ಲೂಕಿನ ಚೀಮಸಂದ್ರದ ಕೆಆರ್ ಡಿಫೆನ್ಸ್ ಬಡಾವಣೆಯಲ್ಲಿ ನಡೆದಿದೆ.

ಸೆ.3ರಂದು ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವ್ಯಕ್ತಿಯ ಕೃತ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಶಂಕಿತನನ್ನು ಜೆಸ್ಸಿ ಎಂದು ಗುರುತಿಸಲಾಗಿದೆ. ಕೈಯಲ್ಲಿ ಗುದ್ದಲಿ ಹಿಡಿದುಕೊಂಡು ಬಂದಿದ್ದ. ಮನೆಯ ಕಿಟಕಿಯ ಗಾಜು ಒಡೆದು ಹಾಕಿದ್ದಾನೆ. ಮನೆಯ ಎದುರು ನಿಲುಗಡೆ ಮಾಡಿದ್ದ ಕಾರಿಗೂ ಹಾನಿ ಮಾಡಿದ್ದಾನೆ. ಮನೆಯಲ್ಲಿದ್ದ ಮಹಿಳೆ ಹಾಗೂ ಅವರ ಪುತ್ರಿ ಕಿರುಚಾಡಿದ್ದರಿಂದ ಅಕ್ಕಪಕ್ಕದ ನಿವಾಸಿಗಳು ಸ್ಥಳಕ್ಕೆ ಬಂದಿದ್ದರು. ಬಳಿಕ ಆತನನ್ನು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.