ಬೆಂಗಳೂರು: ನಮ್ಮ ಮೆಟ್ರೊ ನೇರಳೆ ಮಾರ್ಗದಲ್ಲಿ ಮೇ 31ರಂದು ಭಾನುವಾರ ಅತ್ತಿಗುಪ್ಪೆ ಮತ್ತು ವಿಜಯನಗರ ಮೆಟ್ರೊ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಹಾಗಾಗಿ ಅಂದು ಬೆಳಿಗ್ಗೆ 7ರಿಂದ 9ರವರೆಗೆ ದೀಪಾಂಜಲಿ ನಗರ ನಿಲ್ದಾಣ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್ಆರ್) ನಿಲ್ದಾಣಗಳ ನಡುವೆ ಮೆಟ್ರೊ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ.

ಈ ಮಾರ್ಗದಲ್ಲಿ ಚಲ್ಲಘಟ್ಟದಿಂದ ಮೈಸೂರು ರಸ್ತೆವರೆಗೆ, ಮೆಜೆಸ್ಟಿಕ್ನಿಂದ ವೈಟ್ಫೀಲ್ಡ್ವರೆಗೆ (ಕಾಡುಗೋಡಿ) ಸಂಚಾರ ಎಂದಿನಂತೆ ಇರಲಿದೆ. ಮಾದಾವರ–ರೇಷ್ಮೆ ಸಂಸ್ಥೆ ನಡುವಿನ ಹಸಿರು ಮಾರ್ಗದಲ್ಲಿ ಆರ್.ವಿ. ರಸ್ತೆ–ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗದಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.