ಬೆಂಗಳೂರು: ನಾರಾಯಣ ಹೆಲ್ತ್ ಮತ್ತು ವೋಲ್ವೋ ಗ್ರೂಪ್ ಜಂಟಿಯಾಗಿ ಹಮ್ಮಿಕೊಂಡಿರುವ ವೆಲ್ನೆಸ್ ಆನ್ ವೀಲ್ಸ್ ಅಭಿಯಾನದಡಿ 100ನೇ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಯಿತು.

ಈ ಯೋಜನೆ ಮೂಲಕ ಇದುವರೆಗೆ 10,000ಕ್ಕೂ ಹೆಚ್ಚು ಉಚಿತ ಮುನ್ನೆಚ್ಚರಿಕೆ ಆರೋಗ್ಯ ತಪಾಸಣೆಗಳನ್ನು ನಡೆಸಲಾಗಿದೆ. ರೋಗಗಳ ಆರಂಭಿಕ ಪತ್ತೆ ಹಚ್ಚುವಿಕೆ ಮತ್ತು ಆರೋಗ್ಯ ಸೇವೆಯಿಂದ ವಂಚಿತರಾದ ಸಮುದಾಯಗಳಿಗೆ ಗುಣಮಟ್ಟದ ವೈದ್ಯಕೀಯ ನೆರವು ನೀಡಲು ಈ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದರು.

ನಾರಾಯಣ ಹೆಲ್ತ್ನ ಸಂಸ್ಥಾಪಕ ಮತ್ತು ಅಧ್ಯಕ್ಷ ಡಾ. ದೇವಿ ಪ್ರಸಾದ್ ಶೆಟ್ಟಿ ಮಾತನಾಡಿ, ‘ರೋಗಿಗಳು ತಪಾಸಣೆಗಾಗಿ ಆಸ್ಪತ್ರೆಗೆ ಬರುವಾಗ ತಡವಾಗುವುದು ಆರೋಗ್ಯ ಕ್ಷೇತ್ರದಲ್ಲಿ ನಮಗೆ ಎದುರಾಗುವ ಅತಿದೊಡ್ಡ ಸವಾಲು. ಕಾಯಿಲೆಯನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವುದರಿಂದ ಚಿಕಿತ್ಸೆಯ ಫಲಿತಾಂಶವನ್ನು ಉತ್ತಮಪಡಿಸಬಹುದು. ಕುಟುಂಬಗಳ ಮೇಲಿನ ಆರ್ಥಿಕ ಹೊರೆ ಹಾಗೂ ಆರೋಗ್ಯ ವ್ಯವಸ್ಥೆಯ ಮೇಲಿನ ಒತ್ತಡವನ್ನು ಕಡಿಮೆ ಮಾಡಬಹುದು. ಅದಕ್ಕಾಗಿ ಇಂಥ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.

ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ ಮಾತನಾಡಿ, ‘ದೇವರು ಕೇವಲ ದೇವಾಲಯಗಳಿಗೆ ಸೀಮಿತವಾಗಿಲ್ಲ. ದೈವತ್ವವು ಪ್ರತಿ ಮನೆಯಲ್ಲೂ ಮತ್ತು ಪ್ರತಿ ಜೀವದಲ್ಲೂ ನೆಲೆಸಿದೆ. ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಹೊಂದುವ ಹಕ್ಕಿದೆ’ ಎಂದು ಹೇಳಿದರು.

ವೋಲ್ವೋ ಗ್ರೂಪ್ ಇಂಡಿಯಾದ ಅಧ್ಯಕ್ಷ ಕಮಲ್ ಬಾಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ. ರಘುನಂದನ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-4-1630950639

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.