ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಜನಗಣತಿ-2027ರ ಮೊದಲ ಹಂತ ಮನೆ-ಮನೆಗೆ ಭೇಟಿ ನೀಡಿ, ಮನೆ ಪಟ್ಟಿ ಸಿದ್ದಪಡಿಸುವ ಕಾರ್ಯ ಏ.16ರಿಂದ ಆರಂಭವಾಗಲಿದೆ. ಇದಕ್ಕಾಗಿ 26 ಸಾವಿರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದರು.

ಗಣತಿದಾರರು ಮತ್ತು ಮೇಲ್ವಿಚಾರಕರು, ಅಧಿಕಾರಿಗಳ ಸಹಕಾರದೊಂದಿಗೆ ಎಲ್ಲಾ ಮನೆಗಳ ಸಮಗ್ರ ಮತ್ತು ನಿಖರ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ ಎಂದರು.

23,705 ಗಣತಿದಾರರು, 2,912 ಮೇಲ್ವಿಚಾರಕರು ಸೇರಿದಂತೆ 26,616 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎಲ್ಲಾ ನಾಗರಿಕರು ಜನಗಣತಿ ತಂಡಗಳಿಗೆ ಪೂರ್ಣ ಸಹಕಾರ ನೀಡಿ, ನಿಖರ ಮಾಹಿತಿಯನ್ನು ಒದಗಿಸುವಂತೆ ವಿನಂತಿಸಲಾಗಿದೆ. ಜನಗಣತಿಯಲ್ಲಿ ಭಾಗವಹಿಸುವುದು ಒಂದು ಮಹತ್ವದ ರಾಷ್ಟ್ರೀಯ ಕರ್ತವ್ಯವಾಗಿದೆ ಎಂದು ಹೇಳಿದರು.

ಜನಗಣತಿ ಉದ್ದೇಶಕ್ಕಾಗಿ ಮಾಹಿತಿ ಯನ್ನು ನೀಡುವುದು ಜನಗಣತಿ ಕಾಯ್ದೆ 1948ರ ಅನ್ವಯ ಕಡ್ಡಾಯವಾಗಿದ್ದು, ಮಾಹಿತಿ ನೀಡಲು ನಿರಾಕರಿಸಿ ದಲ್ಲಿ ಅಥವಾ ಸಿಬ್ಬಂದಿಗೆ ಅಸಹಕಾರ ತೋರಿದಲ್ಲಿ ಕಾಯ್ದೆಯ ವಿಧಿಗಳ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.