ಬೆಂಗಳೂರು: ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾಯಂಡಹಳ್ಳಿಯ ಪ್ಲಾಸ್ಟಿಕ್ ಗೋದಾಮಿನಲ್ಲಿ ಗುರುವಾರ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿ, ಗುಜರಿ ಸಾಮಗ್ರಿಗಳು ಭಸ್ಮವಾಗಿವೆ.

ಶಾರ್ಟ್ ಸರ್ಕಿಟ್ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.

ತಮಿಳುನಾಡಿನ ಕುಂದನ್ ಎಂಬುವರಿಗೆ ಸೇರಿದ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಳಿಗ್ಗೆ 8 ಗಂಟೆ ಸುಮಾರಿಗೆ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಬೆಂಕಿ ವ್ಯಾಪಿಸಿ ಗೋದಾಮು ಧಗಧಗನೇ ಹೊತ್ತಿ ಉರಿದಿದೆ. ಗೋದಾಮಿನಲ್ಲಿ ಯಾರೂ ಇರಲಿಲ್ಲ. ಯಾವುದೇ ಪ್ರಾಣಹಾನಿಯೂ ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಕಿ ಬಿದ್ದ ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಸಿಬ್ಬಂದಿ ಸ್ಥಳಕ್ಕೆ ಬಂದು ಮೂರು ವಾಹನಗಳಲ್ಲಿ ನಿರಂತರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ಹೆಚ್ಚಾಗಿ ಪ್ಲಾಸ್ಟಿಕ್ ವಸ್ತುಗಳಿದ್ದ ಕಾರಣ ಬೆಂಕಿಯಿಂದ ದೊಡ್ಡಮಟ್ಟದ ಹೊಗೆ ಆವರಿಸಿಕೊಂಡಿತ್ತು. ಪಕ್ಕದಲ್ಲಿಯೇ ಇದ್ದ ಕಬ್ಬಿಣದ ರಾಡ್ಗಳು, ಡ್ರಮ್ಗಳನ್ನು ಶೇಖರಿಸಿದ್ದ ಗೋದಾಮಿಗೂ ಬೆಂಕಿ ವ್ಯಾಪಿಸಿದೆ. ಹೀಗಾಗಿ, ಅಲ್ಲಿಯೂ ಕೆಲವು ವಸ್ತುಗಳು ಸುಟ್ಟು ಹೋಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಕುಂದನ್ ಅವರು ಎರಡು ವರ್ಷದಿಂದ ಗೋದಾಮು ನಡೆಸುತ್ತಿದ್ದರು. ಬುಧವಾರ ಸಂಜೆ ತಮಿಳುನಾಡಿಗೆ ತೆರಳಿದ್ದರು. ಗುರುವಾರ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದೆ ಎಂದು ಮೂಲಗಳು ಹೇಳಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-4-1325616993

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.