ಬೆಂಗಳೂರು: ಮಾನಸಿಕ ಆರೋಗ್ಯ ವೃದ್ಧಿ ಗಾಗಿ ಡಿಜಿಟಲ್ ತಂತ್ರಜ್ಞಾನದ ನಿರ್ವಹಣೆ ಬಗ್ಗೆ ನೀತಿ ರೂಪಿಸಲು ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆಯು (ನಿಮ್ಹಾನ್ಸ್) ಇದೇ 17ಕ್ಕೆ ಸಮಾಲೋಚನಾ ಸಭೆ ಹಮ್ಮಿಕೊಂಡಿದೆ.

ಈ ಸಭೆಯು ನಿಮ್ಹಾನ್ಸ್–ಐಸಿಎಂಆರ್ ಸೆಂಟರ್ ಫಾರ್ ಅಡ್ವಾನ್ಸ್ಡ್ ರಿಸರ್ಚ್ ಮತ್ತು ‘ಸರ್ವೀಸ್ ಫಾರ್ ಹೆಲ್ದಿ ಯೂಸ್ ಆಫ್ ಟೆಕ್ನಾಲಜಿ ಕ್ಲಿನಿಕ್’ (ಶಟ್) ಸಹಯೋಗದಲ್ಲಿ ನಡೆಯಲಿದೆ. ‘ತಂತ್ರಜ್ಞಾನ ವ್ಯಸನ ನಿರ್ವಹಣೆ’ ಬಗ್ಗೆ ಸಭೆಯಲ್ಲಿ ತಜ್ಞರು ಚರ್ಚಿಸಲಿದ್ದಾರೆ.

ಡಿಜಿಟಲ್ ಸಾಧನಗಳ ಸುರಕ್ಷಿತ ಬಳಕೆಯ ಕುರಿತು ರಾಷ್ಟ್ರೀಯ ಮಟ್ಟದಲ್ಲಿ ಮಾರ್ಗಸೂಚಿ ರೂಪಿಸುವ ಜತೆಗೆ, ಅಗತ್ಯ ಶಿಫಾರಸುಗಳನ್ನು ಕೇಂದ್ರಕ್ಕೆ ಸಲ್ಲಿಸಲು ನಿಮ್ಹಾನ್ಸ್ ನಿರ್ಧರಿಸಿದೆ.

‘ದೇಶದಲ್ಲಿ ಡಿಜಿಟಲ್ ತಂತ್ರಜ್ಞಾನ ಬಳಕೆಗೆ ಅನುಗುಣವಾಗಿ ಮಾನಸಿಕ ಆರೋಗ್ಯ ರಕ್ಷಣೆಗೆ ಉತ್ತೇಜಿಸಬೇಕಿದೆ. ಡಿಜಿಟಲ್ ತಂತ್ರಜ್ಞಾನದ ಸುರಕ್ಷಿತ ಮತ್ತು ಜವಾಬ್ದಾರಿಯುತ ಬಳಕೆಗಾಗಿ ಜಾರಿಗೆ ತರಬಹುದಾದ ಮಾರ್ಗಸೂಚಿ, ಶಿಫಾರಸುಗಳನ್ನು ಸಿದ್ಧಪಡಿಸುವುದು ಈ ಸಭೆಯ ಉದ್ದೇಶ. ಮಾನಸಿಕ ಆರೋಗ್ಯ ತಜ್ಞರು, ವಿವಿಧ ಖಾಸಗಿ ಹಾಗೂ ಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಪ್ರತಿನಿಧಿಗಳು, ಆರೋಗ್ಯ ಸಚಿವಾಲಯದ ಪ್ರತಿನಿಧಿಗಳು ಸೇರಿದಂತೆ ತಜ್ಞರು ಸಭೆಯಲ್ಲಿ ಭಾಗವಹಿಸ ಲಿದ್ದಾರೆ’ ಎಂದು ನಿಮ್ಹಾನ್ಸ್ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-4-1095943626

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.