ಬೆಂಗಳೂರು: ಸಂಗೀತ, ಮಿದುಳು, ಮನಸ್ಸು ಮತ್ತು ಆರೋಗ್ಯಕ್ಕೆ ರಾಷ್ಟ್ರೀಯ ಕೇಂದ್ರ ಸ್ಥಾಪಿಸಲು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಮತ್ತು ಮರ್ಕ್ಯುರಿ ಫೌಂಡೇಷನ್ ಒಡಂಬಡಿಕೆ ಮಾಡಿಕೊಂಡಿವೆ.

ಸಂಗೀತ ಸಂಯೋಜಕ ಇಳೆಯರಾಜ ಅವರ ಆಶ್ರಯದಲ್ಲಿ ಈ ಕೇಂದ್ರ ನಿರ್ಮಾಣವಾಗುತ್ತಿದೆ. ಈ ಕೇಂದ್ರವು ಸಂಗೀತ, ನರವಿಜ್ಞಾನ, ಮಾನಸಿಕ ಆರೋಗ್ಯ ಹಾಗೂ ಸಮಗ್ರ ಆರೋಗ್ಯ ಕ್ಷೇತ್ರದಲ್ಲಿ ಸಂಶೋಧನೆ ಕೈಗೊಳ್ಳಲಿದೆ. ಈ ಕ್ಷೇತ್ರಗಳಲ್ಲಿ ಕೇಂದ್ರವು ಶಿಕ್ಷಣ ನೀಡುವ ಜತೆಗೆ, ಜಾಗೃತಿಯನ್ನೂ ಮೂಡಿಸಲಿದೆ ಎಂದು ನಿಮ್ಹಾನ್ಸ್ ತಿಳಿಸಿದೆ.

ಸಂಗೀತವು ಮಾನಸಿಕ ಆರೋಗ್ಯ ವೃದ್ಧಿಗೆ ಸಹಕಾರಿಯಾಗಿದ್ದು, ಪುರಾವೆ ಆಧಾರಿತ ವಿಧಾನಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಕಲೆ ಮತ್ತು ನರವಿಜ್ಞಾನದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-4-1814193277

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.