ಬೆಂಗಳೂರು: ಅರಕೆರೆಯ ಶಾಂತಿನಿಕೇತನ ಬಡಾವಣೆಯಲ್ಲಿ ಟ್ಯೂಷನ್ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಬಾಲಕ ನಿಶ್ಚಿತ್ನನ್ನು (13) ಅಪಹರಿಸಿ ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹುಳಿಮಾವು ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಗುರುಮೂರ್ತಿ ಹಾಗೂ ಗೋಪಾಲಕೃಷ್ಣ ಬಂಧಿತರು.

ಇಬ್ಬರು ಆರೋಪಿಗಳು ಕಗ್ಗಲಿಪುರ ಅರಣ್ಯದಲ್ಲಿ ಅಡಗಿ ಕುಳಿತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಗುರುವಾರ ತಡರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು

ಕಾರ್ಯಾಚರಣೆ ವೇಳೆ ಪೊಲೀಸರ ಮೇಲೆ ಆರೋಪಿಗಳು ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಪ್ರಯತ್ನಿಸಿದ್ದರು. ಆಗ ಹುಳಿಮಾವು ಠಾಣೆಯ ಪೊಲೀಸರು ಆತ್ಮರಕ್ಷಣೆಗಾಗಿ

ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಳ್ಳಲು ಯಶಸ್ವಿಯಾದರು. ಇಬ್ಬರ ಅಪಹರಣಕಾರರ ಕಾಲಿಗೆ ಗುಂಡೇಟು ಬಿದ್ದಿದೆ.

ಜಯನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮೃತ ಬಾಲಕ ನಿಶ್ಚಿತ್ ತಂದೆಗೆ ಪರಿಚಯವಿದ್ದ ಆರೋಪಿಗಳೇ ಕೃತ್ಯ ಎಸಗಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.

ಬುಧವಾರ ರಾತ್ರಿ ಟ್ಯೂಷನ್ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಬಾಲಕನನ್ನು ಅಪಹರಿಸಿ ₹5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಹುಳಿಮಾವು ಠಾಣೆಗೆ ಪೋಷಕರು ಘಟನೆ ಕುರಿತು ಮಾಹಿತಿ ನೀಡಿದ್ದರು. ಒಂದೆಡೆ ಪೊಲೀಸರು ಕಾರ್ಯಾಚರಣೆಗೆ ಮುಂದಾಗಿದ್ದರು. ಮತ್ತೊಂದೆಡೆ ಪೋಷಕರು, ಆರೋಪಿಗಳಿಗೆ ₹5 ಲಕ್ಷ ನೀಡಿ ಮಗನನ್ನು ರಕ್ಷಿಸಿಕೊಳ್ಳಲು ಮುಂದಾಗಿದ್ದರು. ಅಷ್ಟರಲ್ಲಿ ಬಾಲಕನ್ನು ಆರೋಪಿಗಳು ಕಗ್ಗಲಿಪುರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕತ್ತು ಕೊಯ್ದು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದರು. ಗುರುವಾರ ಸಂಜೆ ಜಾನುವಾರುಗಳನ್ನು ಮನೆಗೆ ಕರೆತರಲು ಕಾಡಿಗೆ ಹೋಗಿದ್ದ ವ್ಯಕ್ತಿಯೊಬ್ಬರು ಬಂಡೆಯ ಮೇಲೆ ಸುಟ್ಟ ಸ್ಥಿತಿಯಲ್ಲಿ ಬಾಲಕನ ಮೃತದೇಹವನ್ನು ಕಂಡು ಪೊಲೀಸರಿಗೆ ಮಹಿತಿ ನೀಡಿದ್ದರು.
.ಬಾಲಕನ ಅಪಹರಿಸಿ ಕೊಲೆ: ಪೆಟ್ರೋಲ್ ಸುರಿದು ಬೆಂಕಿಯಿಟ್ಟ ದುಷ್ಕರ್ಮಿಗಳು .ಬಿಟ್ ಕಾಯಿನ್ಗೆ ಬೇಡಿಕೆಯಿಟ್ಟಿದ್ದ ಉಜಿರೆ ಬಾಲಕನ ಅಪಹರಣಕಾರರು ಕೋಲಾರದಲ್ಲಿ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.