ಬೆಂಗಳೂರು: ‘ರಾಜಾಜಿನಗರದ ಐದನೇ ಬ್ಲಾಕ್ನಲ್ಲಿರುವ ನ್ಯಾಷನಲ್ ಪಬ್ಲಿಕ್ ಶಾಲೆಯಿಂದ (ಎನ್ಪಿಎಸ್) ನೆರೆಹೊರೆಯವರಿಗೆ ತೀವ್ರ ತೊಂದರೆಯಾಗುತ್ತಿದೆ’ ಎಂದು ಆಕ್ಷೇಪಿಸಿ ಸ್ಥಳೀಯ ನಿವಾಸಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಸಂಬಂಧ ರಾಜಾಜಿನಗರ 5ನೇ ಬ್ಲಾಕ್ ನಿವಾಸಿಗಳ ಕಲ್ಯಾಣ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಪ್ರತಿವಾದಿ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಮತ್ತು ಸಕ್ಷಮ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಜುಲೈ 2ಕ್ಕೆ ಮುಂದೂಡಿತು.

ಅರ್ಜಿಯಲ್ಲಿ ಏನಿದೆ?: ‘ಶಾಲೆಯು ದಿನವಿಡೀ ಧ್ವನಿವರ್ಧಕ ವ್ಯವಸ್ಥೆಯನ್ನು ಬಳಸುತ್ತದೆ. ಇದು ಸ್ಥಳೀಯರಿಗೆ, ವಿಶೇಷವಾಗಿ ಶಾಲೆಯ ಅಕ್ಕಪಕ್ಕದ ಮನೆಗಳಲ್ಲಿ ವಾಸ ಮಾಡುವ ಮತ್ತು ಮನೆಯಿಂದಲೇ ಕಚೇರಿಯ ಕರ್ತವ್ಯ ನಿರ್ವಹಿಸುವವರಿಗೆ ತೀವ್ರ ತೊಂದರೆ ಉಂಟು ಮಾಡುತ್ತಿದೆ’ ಎಂದು ಅರ್ಜಿಯಲ್ಲಿ ದೂರಲಾಗಿದೆ.‘ಶಾಲೆಯ ಪ್ರವೇಶದಲ್ಲಿ ನಿಯಮಾನುಸಾರ ಈ ಪ್ರದೇಶದಲ್ಲಿ ವಾಸಿಸುವ ಮಕ್ಕಳಿಗೇ ಕಡ್ಡಾಯವಾಗಿ ಆದ್ಯತಾ ಅಂಶವನ್ನು ಸಂಪೂರ್ಣ ಗಾಳಿಗೆ ತೂರಲಾಗಿದೆ’ ಎಂದು ಆರೋಪಿಸಲಾಗಿದೆ. ‘ಶಾಲೆಯು ತನ್ನ ಬಸ್ಗಳನ್ನು ಕ್ಯಾಂಪಸ್ ಹೊರಗೆ ನಿಲ್ಲಿಸುವುದರಿಂದ ರಸ್ತೆಯುದ್ದಕ್ಕೂ ದಟ್ಟಣೆ ಉಂಟಾಗುತ್ತದೆ. ನೆರೆಹೊರೆಯವರಿಗೆ ತಿಳಿಸದೆ ಶಾಲಾ ಅಧಿಕಾರಿಗಳು ಪದೇ ಪದೇ ಕಾರ್ಯಕ್ರಮಗಳು ಮತ್ತು ಪೋಷಕ-ಶಿಕ್ಷಕರ ಸಭೆಗಳನ್ನು (ಪಿಟಿಎಂ) ಆಯೋಜಿಸುತ್ತಿರುತ್ತಾರೆ. ಇದರಿಂದ ವಾಹನ ದಟ್ಟಣೆ ಇನ್ನಷ್ಟು ಹೆಚ್ಚಾಗಿ ಸ್ಥಳೀಯರಿಗೆ ಇನ್ನಿಲ್ಲದೆ ತೊಂದರೆಗಳಾಗುತ್ತಿವೆ’ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

‘ನ್ಯಾಷನಲ್ ಪಬ್ಲಿಕ್ ಶಾಲೆಯ ನಡವಳಿಕೆಯಿಂದಾಗಿ ನಾವು ಎದುರಿಸಿದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಸಲ್ಲಿಸಲಾದ ಮನವಿಗಳನ್ನು ಪರಿಗಣಿಸಲು ಸರ್ಕಾರ ಮತ್ತು ಸಂಬಂಧಿಸಿದವರಿಗೆ ನಿರ್ದೇಶನಗಳನ್ನು ನೀಡಬೇಕು’ ಎಂದು ಕೋರಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-4-1557436272

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.