ಬೆಂಗಳೂರು: ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆ ಮದ್ರಾಸ್ ರಸ್ತೆ ಬಳಿ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ.

ಗಾಯತ್ರಿ ಲೇಔಟ್ನ 2ನೇ ಮುಖ್ಯರಸ್ತೆಯ ನಿವಾಸಿ, ಖಾಸಗಿ ಸಂಸ್ಥೆಯ ಉದ್ಯೋಗಿ ಕಿರಣ್ (38) ಮೃತ ವ್ಯಕ್ತಿ.

ಕಿರಣ್ ಅವರು ಬೈಕ್ನಲ್ಲಿ ಶನಿವಾರ ರಾತ್ರಿ 12.30ರ ವೇಳೆಗೆ ಮನೆಗೆ ತೆರಳುತ್ತಿದ್ದಾಗ, ಹೊಸಕೋಟೆಯಿಂದ ಕೆ.ಆರ್. ಪುರ ಕಡೆಗೆ ತೆರಳುತ್ತಿದ್ದ ಗೂಡ್ಸ್ ವಾಹನ, ಹಿಂದಿನಿಂದ ಬೈಕ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಿರಣ್ ಅವರ ತಲೆಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ವಾಹನದ ಚಾಲಕ ದಾವಣಗೆರೆಯ ವಿಜಯ್ ಎಂಬಾತನನ್ನು ಬಂಧಿಸಿ, ವಾಹನ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.