ಬೆಂಗಳೂರು: ‘ಜಿಬಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಕೋರ್ಟ್ ನಿರ್ದೇಶನದ ಪ್ರಕಾರ ನಡೆಯುತ್ತದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಚುನಾವಣೆ ಯಾವಾಗ ನಡೆಯಲಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಚುನಾವಣಾ ಆಯೋಗ ಅದನ್ನು ನಿರ್ಧರಿಸುತ್ತದೆ’ ಎಂದರು.

ಈ ವರ್ಷ ಜಿಬಿಎ ಆದಾಯದ ನಿರೀಕ್ಷೆಯ ಬಗ್ಗೆ ಪ್ರತಿಕ್ರಿಯಿಸಿ, ‘ಆದಾಯ ಬರಲಿ ನೋಡೋಣ. ನಾವು ಆದಾಯದ ಲೆಕ್ಕ ಹಾಕುತ್ತಿಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಬದುಕು ರಕ್ಷಣೆ ಮಾಡಬೇಕು. ಚಿನ್ನ ಖರೀದಿ ಮಾಡಬೇಡಿ, ಇಂಧನ ಬಳಕೆ ಕಡಿಮೆ ಮಾಡಿ, ವಿದೇಶ ಪ್ರಯಾಣ ಬೇಡ ಎಂದು ಹೇಳುವ ಕಷ್ಟ ಕಾಲದಲ್ಲಿ ಜನರಿಗೆ ಒಳ್ಳೆಯದಾಗಬೇಕು’ ಎಂದು ಹೇಳಿದರು.

‘ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ದೇಶಕ್ಕೆ ದೊಡ್ಡ ಅಪಮಾನವಾಗಿದ್ದು, ಕೇಂದ್ರ ಸಚಿವರು ಹಾಗೂ ಸಂಸದರು ಇದಕ್ಕೆ ಉತ್ತರಿಸಬೇಕು. ಇದೇ ಪ್ರಕರಣ ನಮ್ಮ ರಾಜ್ಯದಲ್ಲಿ ಆಗಿದ್ದರೆ ಇಷ್ಟು ಹೊತ್ತಿಗೆ ನಮ್ಮ ಮೇಲೆ ತೀವ್ರ ವಾಗ್ದಾಳಿ ನಡೆಸುತ್ತಿದ್ದರು. ಹಲವು ಕನಸು ಕಟ್ಟಿಕೊಂಡು ಕಷ್ಟಪಟ್ಟಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರು ಆಕ್ರೋಶಗೊಂಡಿದ್ದಾರೆ’ ಎಂದು ನೀಟ್ ಪರೀಕ್ಷೆ ರದ್ದಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-15-1788107595

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.