ಪೀಣ್ಯ ದಾಸರಹಳ್ಳಿ: ಅಬ್ಬಿಗೆರೆಯ ಸಪ್ತಗಿರಿ ಬಡಾವಣೆ ಹತ್ತಿರದ ಸ್ಮಶಾನ ಜಾಗದ ಒತ್ತುವರಿಯನ್ನು ಕೂಡಲೇ ತೆರವು ಗೊಳಿಸುವಂತೆ ಶಾಸಕ ಎಸ್. ಮುನಿರಾಜು ಅಧಿಕಾರಿಗಳಿಗೆ ಸೂಚಿಸಿದರು.

‘ಸ್ಮಶಾನದ ಜಾಗವನ್ನು ಒತ್ತುವರಿ ಮಾಡಿ, ನಿವೇಶನ ರಚಿಸಿ ಮಾರಾಟ ಮಾಡಿದ್ದಾರೆ. ಕೆಲವರು ಮನೆ ಕಟ್ಟಿದ್ದಾರೆ.ಎಲ್ಲವನ್ನೂ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು’ ಎಂದು ಕಂದಾಯ ಅಧಿಕಾರಿ ಗಳಿಗೆ ನಿರ್ದೇಶಿಸಿದರು. ಸ್ಮಶಾನದ ಪಕ್ಕದ ಮುಖ್ಯರಸ್ತೆಯನ್ನು ಸಂಪರ್ಕ ರಸ್ತೆಯನ್ನಾಗಿ ಬಡಾವಣೆಯ ನಿವಾಸಿ ಗಳಿಗೆ ನಿರ್ಮಿಸಿಕೊಡಬೇಕು.ಮಕ್ಕಳುಶಾಲೆಗೆ ಹೋಗಲು ಮತ್ತು ಆಂಬುಲೆನ್ಸ್ ಗಳಿಗೆ ರಸ್ತೆ ಸಂಪರ್ಕ ಬೇಕಾಗಿದೆ ಎಂದು ಸ್ಥಳೀಯರು ಮನವಿ ಮಾಡಿದರು.

‘ಶಾಸಕರು ಈಗಾಗಲೇ ಸ್ಮಶಾನದ ಜಾಗವನ್ನು ಸರ್ವೆ ಮಾಡಿಸಿ, ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಿ, ರಸ್ತೆ ಸಂಪರ್ಕ ಉಳಿಸಿಕೊಡುತ್ತೇನೆ ಎಂದು ಭರವಸೆ ನೀಡಿ ದ್ದಾರೆ’ ಎಂದು ಸ್ಥಳೀಯರು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-4-155141355

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.