ಬೆಂಗಳೂರು: ಶುಚಿತ್ವ, ಸುರಕ್ಷೆ, ಶೌಚಾಲಯ ಸೇರಿದಂತೆ ನಿಯಮಗಳನ್ನು ಉಲ್ಲಂಘಿಸಿರುವ 10 ಪೇಯಿಂಗ್ ಗೆಸ್ಟ್ಗಳಿಗೆ (ಪಿಜಿ) ದಕ್ಷಿಣ ನಗರ ಪಾಲಿಕೆಯ ಆರೋಗ್ಯ ವಿಭಾಗದ ಸಿಬ್ಬಂದಿ ಸೋಮವಾರ ಬೀಗಮುದ್ರೆ ಹಾಕಿದ್ದಾರೆ.

ಜಯನಗರ, ಬೆಂಗಳೂರು ದಕ್ಷಿಣ, ಬಿಟಿಎಂ ಲೇಔಟ್, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ 66 ಪಿಜಿಗಳ ವಸತಿ ಗೃಹಗಳಲ್ಲಿ ಶುದ್ಧ ಕುಡಿಯುವ ನೀರು, ಶುಚಿತ್ವ, ಅಡುಗೆ ಕೋಣೆ ನೈರ್ಮಲ್ಯ, ಸುರಕ್ಷತೆ, ಉತ್ತಮ ಶೌಚಾಲಯ ವ್ಯವಸ್ಥೆ, ಅಗ್ನಿಶಾಮಕ ಸಾಧನಗಳು ಹಾಗೂ ಸಿ.ಸಿ.ಟಿ.ವಿ ಕ್ಯಾಮರಾ ಅಳವಡಿಕೆ ಮತ್ತು ಆಹಾರ ಸುರಕ್ಷತಾ ಪ್ರಮಾಣ ಪತ್ರಗಳ ಬಗ್ಗೆ ತಪಾಸಣೆ ಮಾಡಲಾಯಿತು. ಇದರಲ್ಲಿ 10 ಪಿಜಿಗಳಿಗೆ ಬೀಗ ಹಾಕಲಾಗಿದೆ.

ಪಿಜಿ ನಡೆಸುತ್ತಿರುವವರಿಗೆ ತಿಳಿವಳಿಕೆ ಪತ್ರಗಳನ್ನು ಜಾರಿ ಮಾಡಿದ್ದು, ಉದ್ದಿಮೆದಾರರು ಏಳು ದಿನಗಳ ಒಳಗಾಗಿ ನ್ಯೂನತೆಗಳನ್ನು ಸರಿಪಡಿಸಿಕೊಂಡು, ಕಾರ್ಯನಿರ್ವಹಣೆ ಮಾಡುವುದಕ್ಕೆ ಸೂಚಿಸಲಾಗಿದೆ. ಒಟ್ಟು ₹22,500 ದಂಡ ವಿಧಿಸಲಾಗಿದೆ ಎಂದು ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ತಿಳಿಸಿದರು.

10 ರಸ್ತೆ ಹಸಿರೀಕರಣ: ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ತಿಂಗಳು ಕನಿಷ್ಠ 10 ರಸ್ತೆಗಳ ಅಕ್ಕ ಪಕ್ಕದಲ್ಲಿ, ವಿಭಜಕಗಳಲ್ಲಿ ಸಸಿಗಳನ್ನು ನೆಟ್ಟು ಹಸಿರೀಕರಣಗೊಳಿಸಬೇಕು ಎಂದು ಆಯುಕ್ತ ರಾಜೇಂದ್ರ ಚೋಳನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.