ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಪಟ್ಟಂತೆ ‘ಡಿಜಿಟಲ್ ದೂರು ಪರಿಹಾರ ವೇದಿಕೆ’ ಮೂಲಕ ನಾಗರಿಕರು ತಮ್ಮ ದೂರುಗಳನ್ನು ದಿನದ 24 ಗಂಟೆಯೂ ದಾಖಲಿಸಬಹುದು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶದಂತೆ ಆರಂಭಿಸಲಾಗಿರುವ ವ್ಯಾಟ್ಸ್‌ಆ್ಯಪ್ ಸಂಖ್ಯೆ 9448197197 ಮೂಲಕ ಬರುವ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಲಾಗುತ್ತಿದೆ ಎಂದು ಬಿಎಸ್‌ಡಬ್ಲ್ಯುಎಂಎಲ್ ಸಿಇಒ ಕರೀಗೌಡ ತಿಳಿಸಿದರು. ಆಗಸ್ಟ್ 1ರಿಂದ 1483 ದೂರುಗಳನ್ನು ಸ್ವೀಕರಿಸಿದ್ದು ಅದರಲ್ಲಿ 1464 ದೂರಗಳನ್ನು ಇತ್ಯರ್ಥ್ಯಪಡಿಸಲಾಗಿದೆ. ಸೆಪ್ಟೆಂಬರ್‌ನಲ್ಲಿ 515 ದೂರುಗಳು ಬಂದಿದ್ಳು 423 ದೂರುಗಳಿಗೆ ಪರಿಹಾರ ನೀಡಲಾಗಿದೆ. ಸಹಾಯವಾಣಿ: 1533 ಹಾಗೂ ‘ನಮ್ಮ ಬೆಂಗಳೂರು’ ಮೊಬೈಲ್ ಅಪ್ಲಿಕೇಶನ್ ಸಹಾಯ ತಂತ್ರಾಂಶದಲ್ಲೂ ದೂರುಗಳನ್ನು ದಾಖಲಿಸಬಹುದು ಎಂದು ಹೇಳಿದರು.