ಬೆಂಗಳೂರು: ‘ಇಡೀ ಜಗತ್ತಿಗೆ ಮಾಹಿತಿತಂತ್ರಜ್ಞಾನ ಸೇವೆ ಒದಗಿಸುವುದಕ್ಕೆ ಮಾತ್ರವೇ ಬೆಂಗಳೂರು ಹೆಸರುವಾಸಿಯಲ್ಲ. ಭಾರತೀಯ ಆಧ್ಯಾತ್ಮಿಕ ಪರಂಪರೆಯನ್ನೂ ಈ ನಗರ ಪೊರೆಯುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು.

ನಗರದ ಕನಕಪುರ ರಸ್ತೆಯಲ್ಲಿರುವಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಭಾನುವಾರ ಆಯೋಜಿಸಿದ್ದ 45ನೇ ವಾರ್ಷಿಕೋತ್ಸವದಲ್ಲಿ ನೂತನ ಧ್ಯಾನ ಮಂದಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಅಧ್ಯಾತ್ಮ ಅಂದರೆ ಕೇವಲ ಧ್ಯಾನವಲ್ಲ. ಸಮಾಜ ಸೇವೆಯನ್ನು ಒಳಗೊಂಡಾಗಷ್ಟೇ ಅದು ಪರಿಪೂರ್ಣವಾಗುತ್ತದೆ. ಭಾರತೀಯ ಪರಂಪರೆಯಲ್ಲಿ ಸೇವೆ ಎನ್ನುವುದು ಪರಮ ಧರ್ಮ. ಪರೋಪಕಾರವೇ ಪುಣ್ಯ, ಪರಪೀಡನೆಯೇ ಪಾಪ’ ಎಂದರು.

‘ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಇಲ್ಲಿ ಸ್ಥಾಪಿಸಿದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು 180ಕ್ಕೂ ಹೆಚ್ಚು ದೇಶಗಳಲ್ಲಿ ಭಾರತೀಯ ಆಧ್ಯಾತ್ಮಿಕ ಪರಂಪರೆಯನ್ನು ಪಸರಿಸುತ್ತಿದೆ. 45 ವರ್ಷಗಳ ಹಿಂದೆ ಬಿತ್ತಿದ ಬೀಜವು, ಇಂದು ವಿಶಾಲವಾದ ಹೆಮ್ಮರವಾಗಿ ಬೆಳೆದಿದೆ. ಈ ವೃಕ್ಷದ ಸಾವಿರಾರು ಶಾಖೆಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರ ಬದುಕನ್ನು ಸುಂದರಗೊಳಿಸುತ್ತಿವೆ’ ಎಂದು ಹೇಳಿದರು.

ಶ್ರೀ ಶ್ರೀ ರವಿಶಂಕರ್ ಗುರೂಜಿ, ‘ದೇಶ–ವಿದೇಶಗಳಲ್ಲಿ ಶಾಂತಿ ನೆಲಸುವ ಸಲುವಾಗಿ ಪ್ರಧಾನಿ ಮೋದಿ ಅವರು ಮಹತ್ವದ ಹೆಜ್ಜೆಗಳನ್ನು ಇರಿಸಿದ್ದಾರೆ. ಅವರು ಭಾರತವನ್ನು ಹೊಸ ಎತ್ತರಕ್ಕೆ ಒಯ್ದಿದ್ದು, ಈ ಬಗ್ಗೆ ಭಾರತಾಂಬೆಗೆ ಮತ್ತು ಭಾರತೀಯರಿಗೆ ಹೆಮ್ಮೆಯಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-51-1455445436

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.