ಬುಧವಾರ, ಅಕ್ಟೋಬರ್ 5, 2022
26 °C

ಬೆಂಗಳೂರಿನಲ್ಲಿ ಪಿಎಫ್‌ಐ ಸಂಘಟನೆಯ 19 ಮಂದಿ ವಿರುದ್ಧ ಎಫ್‌ಐಆರ್: 14 ಜನ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾನೂನು ಬಾಹಿರ ಚಟುವಟಿಕೆ ಹಾಗೂ ಭಯೋತ್ಪಾದಕ ಸಂಘಟನೆಗಳ ಜೊತೆ ನಂಟು ಹೊಂದಿದ್ದ ಆರೋಪದಡಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ 19 ಮಂದಿ ವಿರುದ್ಧ ಬೆಂಗಳೂರಿನ ಕೆ.ಜಿ.ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪೈಕಿ ಆರೋಪಿಗಳಾದ ಮನ್ಸೂರ್ ಖಾನ್ ಯಾಸೀರ್ ಪಾಷಾ ಸೇರಿದಂತೆ 14 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
‘ದೇಶ ವಿರೋಧಿ ಚಟುವಟಿಕೆ ಬಗ್ಗೆ ಮಾಹಿತಿ ಬಂದಿತ್ತು. ಕೆ.ಜಿ. ಹಳ್ಳಿ ಹಾಗೂ ಗೋವಿಂದಪುರ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಪಿಎಫ್‌ಐ ಸಂಘಟನೆ ಮುಖಂಡರು ಹಾಗೂ ಕಾರ್ಯಕರ್ತರ ಮನೆ  ಹಾಗೂ ಕಚೇರಿಗಳಲ್ಲಿ ಪರಿಶೀಲನೆ ನಡೆಸಲಾಯಿತು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಸಿಸಿಬಿ ಹಾಗೂ ನಗರದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಎನ್‌ಐಎ ಹಾಗೂ ಇತರೆ ತನಿಖಾ ತಂಡಗಳ ಅಧಿಕಾರಿಗಳೂ ಪ್ರತ್ಯೇಕವಾಗಿ ರಾಜ್ಯದಾದ್ಯಂತ ಕಾರ್ಯಾಚರಣೆ ನಡೆಸಿದ್ದಾರೆ’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು