ಶುಕ್ರವಾರ, ಅಕ್ಟೋಬರ್ 7, 2022
28 °C

ಕದ್ದ ವಾಹನಗಳನ್ನು ಬಾಲಕನ ಮೂಲಕ ಮಾರುತ್ತಿದ್ದ ಜಾಲ ಭೇದಿಸಿದ ಬೆಂಗಳೂರು ಪೊಲೀಸರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕದ್ದ ವಾಹನಗಳನ್ನು ಬಾಲಕನ ಮೂಲಕ ಮಾರಾಟ ಮಾಡುತ್ತಿದ್ದ ಜಾಲವನ್ನು ಸುಬ್ರಮಣ್ಯನಗರ ಪೊಲೀಸರು ಭೇದಿಸಿದ್ದು, ₹3.50 ಲಕ್ಷ ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.

‘ಆರ್‌.ಪಿ. ರಸ್ತೆಯಲ್ಲಿ ಬಾಲಕ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಹೊರಟಿದ್ದ. ಆತನ ಬಗ್ಗೆ ಅನುಮಾನಗೊಂಡಿದ್ದ ಗಸ್ತು ಸಿಬ್ಬಂದಿ, ತಡೆದು ತಪಾಸಣೆ ನಡೆಸಿದ್ದರು. ವಾಹನಗಳ ಬಗ್ಗೆ ಸೂಕ್ತ ಮಾಹಿತಿ ನೀಡದಿದ್ದರಿಂದ ಠಾಣೆಗೆ ಕರೆತಂದು ವಿಚಾರಿಸಿದಾಗಲೇ ಜಾಲದ ಕೃತ್ಯ ಬಯಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಬಾಲಕನಿಂದಲೇ 7 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಈತನನ್ನು ವಶಕ್ಕೆ ಪಡೆದು ಬಾಲ ನ್ಯಾಯ ಮಂಡಳಿ ಎದುರು ಹಾಜರುಪಡಿಸಲಾಗಿದೆ. ಈತನ ಮೂಲಕ ವಾಹನ ಮಾರಾಟ ಮಾಡಿಸುತ್ತಿದ್ದ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ’ ಎಂದು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು