ಭಾನುವಾರ, ಜೂನ್ 13, 2021
25 °C

ಪೊಲೀಸರಲ್ಲಿ ಹೆಚ್ಚುತ್ತಿರುವ ಸೋಂಕು: 1,043 ಮಂದಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪೊಲೀಸರಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು, ಮೇ 7ರವರೆಗೆ ನಗರದ 1,043 ಪೊಲೀಸರಿಗೆ ಸೋಂಕು ತಗುಲಿದೆ.

‘ಬೆಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ 1,043 ಪೊಲೀಸರಿಗೆ ಸೋಂಕು ತಗುಲಿದ್ದು, ಅವರಲ್ಲಿ 11 ಮಂದಿ ಮೃತಪಟ್ಟಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘232 ಮಂದಿ ಚಿಕಿತ್ಸೆ ಪಡೆದು ಮನೆಗೆ ಬಂದಿದ್ದಾರೆ. 800 ಸೋಂಕಿತರು ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಆ ಪೈಕಿ ಒಬ್ಬರು ಐಸಿಯು ವಾರ್ಡ್‌ನಲ್ಲಿದ್ದಾರೆ. 34 ಮಂದಿ ಸಾಮಾನ್ಯ ವಾರ್ಡ್‌ಗಳಲ್ಲಿದ್ದು, 764 ಮಂದಿ ಮನೆಯ ಆರೈಕೆಯಲ್ಲಿದ್ದಾರೆ’ ಎಂದೂ ತಿಳಿಸಿದರು.

‘ಸೋಂಕಿತರ ಪೈಕಿ 447 ಮಂದಿ ಲಸಿಕೆ ಪಡೆದವರಿದ್ದು, 151 ಮಂದಿ ಲಸಿಕೆ ಪಡೆದಿಲ್ಲ’ ಎಂದೂ  ಅಧಿಕಾರಿ ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು