ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಸಂಚಾರ ಠಾಣೆಗೆ ಕಮಿಷನರ್ ಭೇಟಿ

Published 6 ಏಪ್ರಿಲ್ 2024, 14:03 IST
Last Updated 6 ಏಪ್ರಿಲ್ 2024, 14:03 IST
ಅಕ್ಷರ ಗಾತ್ರ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣೆಗೆ ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪೊಲೀಸ್ ವ್ಯವಸ್ಥೆ ಹಾಗೂ ಪೊಲೀಸರ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿರುವುದರಿಂದ ಕಮಿಷನರ್ ಅವರು ಠಾಣೆಗಳಿಗೆ ಮೇಲಿಂದ ಮೇಲೆ ಭೇಟಿ ನೀಡುತ್ತಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣೆಗೆ ಶನಿವಾರ ಬೆಳಿಗ್ಗೆ ಹೋಗಿದ್ದ ಕಮಿಷನರ್, ಪೊಲೀಸರ ಕೆಲಸದ ಬಗ್ಗೆ ಮಾಹಿತಿ ಪಡೆದುಕೊಂಡರು. ಠಾಣೆ ಕೆಲಸಗಳ ಪ್ರಗತಿ ಬಗ್ಗೆ ತಿಳಿದುಕೊಂಡರು. ಠಾಣೆಗೆ ಬರುವ ಸಾರ್ವಜನಿಕರ ದೂರುಗಳನ್ನು ಸೌಜನ್ಯದಿಂದ ಆಲಿಸಿ ಕ್ರಮ ಕೈಗೊಳ್ಳುವಂತೆ ಹೇಳಿದರು.

ಜಂಟಿ ಕಮಿಷನರ್ ಎಂ.ಎನ್. ಅನುಚೇತ್, ಡಿಸಿಪಿ ಶಿವಪ್ರಕಾಶ್ ದೇವರಾಜ್ ಹಾಜರಿದ್ದರು.

ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಮಿಷನರ್, ‘ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣೆ ಆಧುನಿಕ ಸೌಲಭ್ಯಗಳನ್ನು ಒಳಗೊಂಡಿದ್ದು, ಸುಸಜ್ಜಿತವಾಗಿ ಕಾರ್ಯನಿರ್ವಹಣೆ ಮಾಡುತ್ತಿರುವುದು ಕಂಡುಬಂತು. ಠಾಣೆ ಪರಿಸರವೂ ಉತ್ತಮವಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT