ಶನಿವಾರ, ಮೇ 28, 2022
28 °C

ನಿಯಮ ಮೀರಿದರೆ, ಧ್ವನಿವರ್ಧಕ ಜಪ್ತಿ: ಪೊಲೀಸ್ ಕಮಿಷನರ್ ಕಮಲ್ ಪಂತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನಿರ್ಬಂಧಿತ ಅವಧಿಯಲ್ಲಿ ಧ್ವನಿವರ್ಧಕ ಬಳಸಲು ಅವಕಾಶವಿಲ್ಲ. ನಿಯಮ ಮೀರಿದರೆ, ಧ್ವನಿವರ್ಧಕ ಜಪ್ತಿ ಮಾಡಿ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಧಾರ್ಮಿಕ‌ ಕೇಂದ್ರ ಸೇರಿದಂತೆ ಇತರೆಡೆ ಧ್ವನಿವರ್ಧಕ ಬಳಕೆ ಬಗ್ಗೆ ಹೈಕೋರ್ಟ್ ನೀಡಿರುವ ನಿರ್ದೇಶನದಂತೆ ಪೊಲೀಸರು ಕೆಲಸ ಮಾಡುತ್ತಿದ್ದಾರೆ’ ಎಂದರು

‘ನಿಯಮ ಮೀರಿ ಧ್ವನಿವರ್ಧಕ ಬಳಸಿದ್ದ 200ಕ್ಕೂ ಹೆಚ್ಚು ಮಂದಿಗೆ ನೋಟಿಸ್ ನೀಡಲಾಗಿದೆ. ಇದರಲ್ಲಿ ಧಾರ್ಮಿಕ ಕೇಂದ್ರಗಳು, ಪಬ್‌ಗಳು, ಹೋಟೆಲ್‌ಗಳೂ ಇವೆ. ಕೆಲವೆಡೆ, ಧ್ವನಿವರ್ಧಕಗಳನ್ನೂ ಜಪ್ತಿ ಮಾಡಲಾಗಿದೆ’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು