ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪರಾಧ ಪ್ರಕರಣಗಳ ಸಂಖ್ಯೆ ಇಳಿಕೆ: ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್‌ ಹೇಳಿಕೆ

ಬೆಂಗಳೂರು ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್‌ ಹೇಳಿಕೆ
Last Updated 7 ಜನವರಿ 2022, 19:48 IST
ಅಕ್ಷರ ಗಾತ್ರ

ಬೆಂಗಳೂರು: ‘ಹಿಂದಿನ ವರ್ಷಗಳಿಗೆ ಹೋಲಿಸಿದರೆ 2021ರಲ್ಲಿ ಬೆಂಗಳೂರಿನಲ್ಲಿ ಅಪರಾಧ ಚಟುವಟಿಕೆಗಳು ಕಡಿಮೆಯಾಗಿವೆ. ಉದ್ಯಾನ ನಗರಿಯು ಈಗ ಸುರಕ್ಷಿತ ನಗರವಾಗಿ ಮಾರ್ಪಟ್ಟಿದೆ’ ಎಂದು ನಗರ ಪೊಲೀಸ್‌ ಕಮಿಷನರ್‌ ಕಮಲ್ ಪಂತ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು‘ನಟ ಪುನೀತ್‌ ರಾಜ್‌ಕುಮಾರ್‌ ಅವರ ಅಕಾಲಿಕ ನಿಧನದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿತ್ತು. 2020ಕ್ಕೆ ಹೋಲಿಸಿದರೆ 2021ರಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗಿವೆ. ಶೇ 99ರಷ್ಟು ಪ್ರಕರಣಗಳನ್ನು ನಮ್ಮ ಸಿಬ್ಬಂದಿ ಬೇಧಿಸಿದ್ದಾರೆ’ ಎಂದು ತಿಳಿಸಿದರು.

‘ಮಹಿಳೆಯರ ಭದ್ರತೆಯ ಸಲುವಾಗಿ ಕೇಂದ್ರ ಸರ್ಕಾರವು ನಿರ್ಭಯಾ ನಿಧಿಯ ಅಡಿಯಲ್ಲಿ ಬಿಡುಗಡೆ ಮಾಡಿದ್ದ ಅನುದಾನ ಸದುಪಯೋಗಪಡಿಸಿಕೊಳ್ಳಲಾಗಿದೆ. ಇದರ ಅಡಿಯಲ್ಲಿ ‘ಸೇಫ್‌ ಸಿಟಿ’ ಯೋಜನೆ ಆರಂಭಿಸಲಾಗಿದೆ. ₹497 ಕೋಟಿ ವೆಚ್ಚದ ಗುತ್ತಿಗೆಯನ್ನು ಹನಿವೆಲ್‌ ಕಂಪನಿಗೆ ನೀಡಲಾಗಿದೆ. ಕಮಿಷನರ್‌ ಕಚೇರಿಯ ಪಕ್ಕದಲ್ಲಿ ಶೀಘ್ರವೇ ‘ಕಮಾಂಡ್‌ ಸೆಂಟರ್‌’ ತಲೆ ಎತ್ತಲಿದೆ. ನೊಂದ ಮಹಿಳೆಯರು, ಮಕ್ಕಳಿಗೆ ಈ ಕೇಂದ್ರದಲ್ಲಿ ವಸತಿ ಸೌಲಭ್ಯದ ಜೊತೆಗೆ ಕಾನೂನು ಸಲಹೆಗಾರರ ನೆರವು ನೀಡಲಾಗುತ್ತದೆ. ವಿಡಿಯೊ ಕಾನ್ಫರೆನ್ಸ್‌ ವ್ಯವಸ್ಥೆಯೂ ಇರಲಿದೆ’ ಎಂದು ಮಾಹಿತಿ ನೀಡಿದರು.

ಅಂಕಿ ಅಂಶಗಳು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT