ಬೆಂಗಳೂರು: ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ಗಳಿಗೆ (ಸಾಮಾನ್ಯ ಪ್ರಕರಣ) ಅಂತರ ಜಿಲ್ಲಾ ವರ್ಗಾವಣೆ ನೀಡುವಂತೆ ಆಗ್ರಹಿಸಿ, ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಕಾನ್ಸ್ಟೆಬಲ್ಗಳ ಕುಟುಂಬಸ್ಥರು ಸೋಮವಾರ ಮನವಿ ಸಲ್ಲಿಸಿದರು.

ಸದಾಶಿವನಗರದ ನಿವಾಸದ ಬಳಿ ಸಚಿವರನ್ನು ಭೇಟಿ ಮಾಡಿದ ಕುಟುಂಬಸ್ಥರು ಮನವಿ ನೀಡಿದರು. ಮನವಿ ಸ್ವೀಕರಿಸಿದ ಬಳಿಕ ಮಾತನಾಡಿದ ಪರಮೇಶ್ವರ, ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ನಗರ ಪೊಲೀಸ್ ಕಮಿಷನರ್ ಅವರೊಂದಿಗೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.

ಒಂದೇ ಘಟಕದಲ್ಲಿ 10 ವರ್ಷ ಕೆಲಸ ಪೂರೈಸಿರುವ 2016ನೇ ಸಾಲಿನ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ಗಳಿಗೆ ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡುವಂತೆ ಕುಟುಂಬಸ್ಥರು ಮನವಿಯಲ್ಲಿ ಕೋರಿದರು.

‘ಇಲಾಖೆಗೆ ಸೇರಿದ ಸಮಯದಲ್ಲಿ ಎರಡೂವರೆ ವರ್ಷ ಪ್ರೊಬೇಷನರಿ ಅವಧಿ ಮುಕ್ತಾಯವಾದ ಮೇಲೆ ಅಂತರ ಜಿಲ್ಲಾ ವರ್ಗಾವಣೆ ಬಯಸುವ ಪೊಲೀಸ್ ಸಿಬ್ಬಂದಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಿಂದ ಆದೇಶ ಪಡೆದುಕೊಂಡು ವರ್ಗಾವಣೆ ಹೊಂದಬಹುದಿತ್ತು. ಆದರೆ, 2024ರಲ್ಲಿ ಮತ್ತೊಂದು ಆದೇಶವನ್ನು ಹೊರಡಿಸಿ ‘ಸಿ’ ವರ್ಗದ ಪೊಲೀಸ್ ಸಿಬ್ಬಂದಿಯ ವರ್ಗಾವಣೆಯ ಅವಧಿಯನ್ನು ಐದು ವರ್ಷದಿಂದ ಏಳು ವರ್ಷಕ್ಕೆ ಹೆಚ್ಚಿಸಲಾಗಿತ್ತು. ಅದಾದ ಮೇಲೆ ಆ ಅವಧಿಯನ್ನು 10 ವರ್ಷಕ್ಕೆ ಹೆಚ್ಚಿಸಲಾಗಿದೆ. ಅಲ್ಲದೇ ವರ್ಗಾವಣೆ ಬಯಸುವ ಸಿಬ್ಬಂದಿ ಕೆಎಸ್ಪಿ ಪೋರ್ಟಲ್ನಲ್ಲಿ ಅರ್ಜಿ ಹಾಕಬೇಕೆಂಬ ನಿಯಮವನ್ನೂ ಜಾರಿಗೊಳಿಸಲಾಗಿದೆ. ನಮ್ಮ ಕುಟುಂಬದಲ್ಲಿ ಕಾನ್ಸ್ಟೆಬಲ್ಗಳಾಗಿ ಕೆಲಸ ಮಾಡುತ್ತಿದ್ದವರು ಆ ನಿಯಮದಂತೆಯೇ ಅರ್ಜಿ ಸಲ್ಲಿಸಿದ್ದರು. ಆದರೆ, ವರ್ಗಾವಣೆ ಆದೇಶ ಸಿಕ್ಕಿಲ್ಲ’ ಎಂದು ನೋವು ತೋಡಿಕೊಂಡರು.

ವರ್ಗಾವಣೆ ವಿಳಂಬದ ಕಾರಣಕ್ಕೆ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದವರ ಪೈಕಿ ಶೇ 80ರಷ್ಟು ಮಂದಿ ಹೆಡ್ ಕಾನ್ಸ್ಟೆಬಲ್ಗಳಾಗಿ ಪದೋನ್ನತಿ ಪಡೆದುಕೊಂಡಿದ್ದಾರೆ. ಕೌಟುಂಬಿಕ ಪರಿಸ್ಥಿತಿ, ಒಬ್ಬನೇ ಮಗ, ಒಂಟಿ ಪೋಷಕರು, ಪೋಷಕರ ಅನಾರೋಗ್ಯ ಕಾರಣಕ್ಕೆ ಉಳಿದ 300 ಸಿಬ್ಬಂದಿ ವರ್ಗಾವಣೆ ನಿರೀಕ್ಷೆಯಲ್ಲಿದ್ದಾರೆ. ಪದೋನ್ನತಿಯ ಅವಕಾಶವನ್ನೂ ಬಿಟ್ಟುಕೊಟ್ಟಿದ್ದಾರೆ. ತಕ್ಷಣವೇ ಅಂತಿಮ ಆದೇಶ ಹೊರಡಿಸಬೇಕು ಎಂದು ಕೋರಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-4-1432729136

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.