ಬೆಂಗಳೂರು: ಡ್ರಗ್ಸ್ ಪೆಡ್ಲರ್ಗಳ ಸ್ನೇಹ ಸಂಪಾದಿಸಿ ಅವರೊಂದಿಗೆ ಪಾರ್ಟಿ ನಡೆಸಿದ್ದ ಆರೋಪದಡಿ ಅಮಾನತುಗೊಂಡಿರುವ ಚಾಮರಾಜಪೇಟೆ ಠಾಣೆಯ ಇನ್ಸ್ಪೆಕ್ಟರ್ ಮಂಜಣ್ಣ ಸೇರಿ 11 ಮಂದಿ ಪೊಲೀಸರ ಭಾವಚಿತ್ರಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ (ಕೆಆರ್ಎಸ್) ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಮಹಾಮಂಗಳಾರತಿ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

ಡ್ರಗ್ಸ್ ಪೆಡ್ಲರ್ಗಳ ಜತೆಗೆ ಕೈಜೋಡಿಸಿದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಧಿಕ್ಕಾರ ಕೂಗಿ, ಆಕ್ರೋಶ ಹೊರಹಾಕಲಾಯಿತು.

ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ರಘು ಜಾಣಗೆರೆ ಮಾತನಾಡಿ, ‘ಯುವ ಜನರನ್ನು ರಕ್ಷಿಸಬೇಕಾದ ಪೊಲೀಸರೇ ಡ್ರಗ್ಸ್ ಪೆಡ್ಲೆರ್ಗಳ ಜೊತೆ ಕೈಜೋಡಿಸಿ ಅಮಾನತು ಆಗಿರುವ ಪ್ರಕರಣವು ತಲೆತಗ್ಗಿಸುವಂತದ್ದು. ಅಮಾನತು ಅಧಿಕಾರಿ ಹಾಗೂ ಪೊಲೀಸರ ವಿರುದ್ಧ ತಕ್ಷಣವೇ ಎಫ್ಐಆರ್ ದಾಖಲಿಸಿ ಬಂಧಿಸಬೇಕು. ಅಲ್ಲದೇ ಸೇವೆಯಿಂದಲೂ ವಜಾ ಮಾಡಬೇಕು’ ಎಂದು ಆಗ್ರಹಿಸಿದರು.

‘ನಾನು ಈ ಠಾಣೆಗೆ ಬರಲು ಲಕ್ಷ ಲಕ್ಷ ಹಣವನ್ನು ಜನಪ್ರತಿನಿಧಿಗೆ ಕೊಟ್ಟು ಬಂದಿದ್ದೇನೆ. ನಮ್ಮನ್ನು ಯಾರು ಏನೂ ಮಾಡಲು ಸಾಧ್ಯವಿಲ್ಲ’ ಎಂಬುದಾಗಿ ಕೆಲವು ಪೊಲೀಸ್ ಅಧಿಕಾರಿಗಳು ರಾಜಾರೋಷವಾಗಿ ಹೇಳುತ್ತಿದ್ದಾರೆ. ಇಂತಹ ನೀಚ ಜನಪ್ರತಿನಿಧಿಗಳನ್ನು ರಾಜ್ಯ ಹೊಂದಿರುವುದು ದೌರ್ಭಾಗ್ಯ’ ಎಂದು ಹೇಳಿದರು.

ರಾಜ್ಯ ಉಪಾಧ್ಯಕ್ಷ ಎಸ್.ಮಂಜುನಾಥ ಮಾತನಾಡಿ, ‘ಕೇವಲ ಚಾಮರಾಜಪೇಟೆ, ಜೆ.ಜೆ.ನಗರ ಠಾಣೆಯ ಪೊಲೀಸರ ಕೃತ್ಯ ಅಲ್ಲ. ನಗರದ ಬಹುತೇಕ ಪೊಲೀಸ್ ಠಾಣೆಯ ಪೊಲೀಸರು ಇಂತಹ ದಂಧೆಯಲ್ಲಿ ಶಾಮೀಲಾಗಿದ್ದಾರೆ’ ಎಂದು ಆಪಾದಿಸಿದರು.

ರಾಜ್ಯ ಜಂಟಿ ಕಾರ್ಯದರ್ಶಿ ಎಲ್. ಜೀವನ್ ಮಾತನಾಡಿ, ‘ಸರ್ಕಾರ ಡ್ರಗ್ಸ್ ದಂಧೆಕೋರರನ್ನು ಮಟ್ಟ ಹಾಕಬೇಕು’ ಎಂದು ಆಗ್ರಹಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಜೆ.ಪಿ.ರಘುನಂದನ, ಶ್ರೀನಿವಾಸ್, ಕಾರ್ಯನಿರ್ವಾಹಕ ಸಮಿತಿ ಸದಸ್ಯ ಮೋಹನ್ ಕುಮಾರ್, ಎಸ್ಸಿ–ಎಸ್ಟಿ ಘಟಕದ ರಾಜ್ಯ ಉಪಾಧ್ಯಕ್ಷ ಪ್ರಕಾಶ್, ಬೆಂಗಳೂರು ಪಶ್ಚಿಮ ಸಂಘಟನಾ ಜಿಲ್ಲಾ ಅಧ್ಯಕ್ಷ ಅಮಿತ್, ಉಪಾಧ್ಯಕ್ಷ ಶ್ರೀನಿವಾಸ್ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ಪಾರ್ಟಿ ಮಾಡಿದ್ದ ಫೋಟೊಗಳು ಮೊಬೈಲ್ನಲ್ಲಿ ಪತ್ತೆ!

ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಬರುವ ಮಾತ್ರೆ ಮಾರಾಟ ಮಾಡಿದ್ದ ಆರೋಪದಲ್ಲಿ ಸಲ್ಮಾನ್, ನಯಾಜ್ ಉಲ್ಲಾ, ಸಲ್ಮಾನ್, ನಯಾಜ್ ಖಾನ್, ತಾಹೇರ್ ಪಟೇಲ್ ಎಂಬುವವರನ್ನು ಬಂಧಿಸಲಾಗಿತ್ತು. ಆರೋಪಿಗಳ ಬಳಿ 1 ಸಾವಿರ ಟೈಡಲ್ ಮಾತ್ರೆಗಳು ಪತ್ತೆ ಆಗಿದ್ದವು. ಆರೋಪಿಗಳ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಪೊಲೀಸರ ಜೊತೆಗೆ ಆರೋಪಿಗಳು ಸಂಪರ್ಕದಲ್ಲಿ ಇರುವುದು, ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಿರುವುದು ಪತ್ತೆ ಆಗಿತ್ತು. ಆರೋಪಿಗಳ ಜೊತೆಗೆ ಪೊಲೀಸರು ಪಾರ್ಟಿ ಮಾಡಿರುವ ಫೋಟೊಗಳು ಸಹ ಮೊಬೈಲ್ನಲ್ಲಿ ಸಿಕ್ಕಿದ್ದವು. ಇಲಾಖೆಯ ಆಂತರಿಕ ತನಿಖೆ ನಡೆಸಿದಾಗ ಪೊಲೀಸರು ಆರೋಪಿಗಳ ಜತೆಗೆ ಸ್ನೇಹ ಸಂಪಾದಿಸಿರುವುದೂ ಗೊತ್ತಾಗಿತ್ತು.

ಚಾಮರಾಜಪೇಟೆ ಠಾಣೆಯ ಇನ್ಸ್ಪೆಕ್ಟರ್ ಟಿ.ಮಂಜಣ್ಣ, ಹೆಡ್ ಕಾನ್ಸ್ಟೆಬಲ್ಗಳಾದ ರಮೇಶ್, ಶಿವರಾಜ್, ಕಾನ್ಸ್ಟೆಬಲ್ಗಳಾದ ಮಧುಸೂದನ್, ಪ್ರಸನ್ನ, ಶಂಕರ್ ಬೆಳಗಲಿ, ಆನಂದ್, ಜೆ.ಜೆ. ನಗರ ಠಾಣೆಯ ಎಎಸ್ಐ ಕುಮಾರ್, ಹೆಡ್ಕಾನ್ಸ್ಟೆಬಲ್ ಆನಂದ್, ಸಿಬ್ಬಂದಿ ಬಸವನಗೌಡ ಸೇರಿ 11 ಮಂದಿಯನ್ನು ಅಮಾನತು ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.