ಬೆಂಗಳೂರು: ನಿಗದಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಪಟಾಕಿ ದಾಸ್ತಾನು ಮಾಡಿಕೊಂಡಿದ್ದ ಮಳಿಗೆಗಳ ಮೇಲೆ ಪೊಲೀಸರು ದಾಳಿ ನಡೆಸಿ, ಮಳಿಗೆಯ ಮಾಲೀಕರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಕಾಟನ್ಪೇಟೆ, ಚಿಕ್ಕಪೇಟೆ, ಕೆಆರ್ ಮಾರುಕಟ್ಟೆ ಹಾಗೂ ಹೊಸೂರು ಭಾಗದಲ್ಲಿ ಪೊಲೀಸರು ಸೋಮವಾರ ಮಧ್ಯಾಹ್ನ ಕಾರ್ಯಾಚರಣೆ ನಡೆಸಿದರು. ಈ ವೇಳೆ ಪರವಾನಗಿ ಪಡೆದ ಪ್ರಮಾಣಕ್ಕಿಂತಲೂ ಹೆಚ್ಚಿನ ದಾಸ್ತಾನು ಮಾಡಿಕೊಂಡಿರುವುದು ಕಂಡುಬಂತು. ಹೆಚ್ಚುವರಿ ಪಟಾಕಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು ಎಂದು ಗೊತ್ತಾಗಿದೆ.

ಹಸಿರು ಪಟಾಕಿ ಹೆಸರಿನಲ್ಲಿ ಸಾಂಪ್ರದಾಯಿಕ ಪಟಾಕಿಗಳ ಮಾರಾಟ ಮಾಡುತ್ತಿರುವುದು, ಪರವಾನಗಿ ಪಡೆಯದವರೂ ಪಟಾಕಿ ಮಾರಾಟ ನಡೆಸುತ್ತಿರುವುದು ಕಂಡುಬಂತು. ಅಂತಹವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬೇಡಿಕೆ ಹೆಚ್ಚಿದೆ ಎನ್ನುವ ಕಾರಣಕ್ಕೆ ಪಟಾಕಿಯನ್ನು ಹೆಚ್ಚಿನ ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಂಡಿದ್ದರೆ, ಅಂತಹ ಮಾಲೀಕರ ವಿರುದ್ದ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಸೀಮಾಂತ್ಕುಮಾರ್ ಸಿಂಗ್ ಅವರು ದೀಪಾವಳಿ ಹಬ್ಬಕ್ಕೂ ಮುನ್ನ ನಡೆದ ಸಭೆಯಲ್ಲಿ ಮಾರಾಟಗಾರರಿಗೆ ಎಚ್ಚರಿಕೆ ನೀಡಿದ್ದರು.

‘ಮಂಗಳವಾರ ಹಾಗೂ ಬುಧವಾರ ಸಹ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಲಾಗುವುದು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.