ಬೆಂಗಳೂರು: ಈಶಾನ್ಯ ವಿಭಾಗದ 11 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕಳೆದುಕೊಂಡಿದ್ದ ಹಾಗೂ ಕಳ್ಳತನವಾಗಿದ್ದ 692 ಮೊಬೈಲ್ ಫೋನ್ಗಳನ್ನು ‘ಸೆಂಟ್ರಲ್ ಎಕ್ವಿಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್’ (ಸಿಇಐಆರ್) ಪೋರ್ಟಲ್ ಸಹಾಯದಿಂದ ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿ ಆಗಿದ್ದಾರೆ.

ಕಳ್ಳತನವಾದ ಮೊಬೈಲ್ಗಳ ಮಾಹಿತಿಯನ್ನು ‘ಇ–ಲಾಸ್ಟ್’ ಆ್ಯಪ್ ಹಾಗೂ ಕೇಂದ್ರ ಸರ್ಕಾರ ರೂಪಿಸಿರುವ ‘ಸೆಂಟ್ರಲ್ ಎಕ್ವಿಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್’ ಪೋರ್ಟಲ್ನಲ್ಲಿ ದಾಖಲು ಮಾಡಲಾಗುತ್ತದೆ. ಈಶಾನ್ಯ ವಿಭಾಗದ ಪೊಲೀಸರು ತಾಂತ್ರಿಕ ಸುಳಿವು ಆಧರಿಸಿ, ತನಿಖೆ ನಡೆಸಿ ಮೊಬೈಲ್ ಪತ್ತೆ ಮಾಡಿ, ಜಪ್ತಿ ಮಾಡಿಕೊಳ್ಳುವಲ್ಲಿ ಯಶಸ್ವಿ ಆಗಿದ್ದಾರೆ.

ಯಲಹಂಕ, ಸಂಪಿಗೆಹಳ್ಳಿ ಹಾಗೂ ದೇವನಹಳ್ಳಿ ಉಪ ವಿಭಾಗದ ಪೊಲೀಸರು ಏಪ್ರಿಲ್ನಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಸಾರ್ವಜನಿಕರು ಕಳೆದುಕೊಂಡಿದ್ದ ಹಾಗೂ ಕಳ್ಳತನವಾಗಿದ್ದ ಮೊಬೈಲ್ ಫೋನ್ಗಳನ್ನು ಜಪ್ತಿ ಮಾಡಿದ್ದಾರೆ.

ಯಲಹಂಕ ಠಾಣೆಯ ಪೊಲೀಸರು 83, ಯಲಹಂಕ ನ್ಯೂಟೌನ್ 76, ಕೊಡಿಗೇಹಳ್ಳಿ 66, ವಿದ್ಯಾರಣ್ಯಪುರ 86, ಸಂಪಿಗೇಹಳ್ಳಿ 107, ಕೊತ್ತನೂರು 70, ಬಾಗಲೂರು 85, ಅಮೃತಹಳ್ಳಿ 66, ಚಿಕ್ಕಜಾಲ 34, ದೇವನಹಳ್ಳಿ 12, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಠಾಣೆಯ ಪೊಲೀಸರು 7 ಮೊಬೈಲ್ ಫೋನ್ ಜಪ್ತಿ ಮಾಡಿದ್ದಾರೆ.

ಸಾರ್ವಜನಿಕರು ಕಳೆದುಕೊಂಡ ಮೊಬೈಲ್ ಫೋನ್ನ ವಿವರವನ್ನು ಸಿಇಐಆರ್ ಪೋರ್ಟಲ್ನಲ್ಲಿ ದಾಖಲಿಸುವುದರಿಂದ ಅಥವಾ ಪೊಲೀಸ್ ಠಾಣೆಗಳಲ್ಲಿ ದೂರು ನೀಡುವುದರಿಂದ ಫೋನ್ಗಳನ್ನು ಪತ್ತೆ ಮಾಡಲು ಅನುಕೂಲ ಆಗಲಿದೆ ಎಂದು ಪೊಲೀಸರು ಮನವಿ ಮಾಡಿದರು. ಈಶಾನ್ಯ ವಿಭಾಗದ ಡಿಸಿಪಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-4-396327954

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.