ಬೆಂಗಳೂರು: ರೈಲ್ವೆ ಹಳಿ ಮೇಲೆ ಮಲಗಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಯಲಹಂಕ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಶ್ರೀಧರ್ ಮೂರ್ತಿ ಅವರು ಕಾಪಾಡಿದ್ದಾರೆ.

ಠಾಣಾ ವ್ಯಾಪ್ತಿಯ ರೈಲ್ವೆ ಹಳಿಯ ಮೇಲೆ ವ್ಯಕ್ತಿಯೊಬ್ಬರು ಮಲಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸ್ ನಿಯಂತ್ರಣ ಕೊಠಡಿಗೆ (112) ಕರೆ ಬಂತು. ಈ ಮಾಹಿತಿ ಸ್ವೀಕರಿಸಿದ ಕೂಡಲೇ ಗಸ್ತು ವಾಹನದಲ್ಲಿದ್ದ ಶ್ರೀಧರ್ ಮೂರ್ತಿ ಅವರು ಸ್ಥಳಕ್ಕೆ ಧಾವಿಸಿದರು. ರೈಲು ಬರುವ ಮುನ್ನವೇ ಹಳಿಯ ಬಳಿಗೆ ತಲುಪಿದ ಅವರು, ವ್ಯಕ್ತಿಯನ್ನು ಸುರಕ್ಷಿತವಾಗಿ ಅಲ್ಲಿಂದ ಕರೆತಂದರು.

‘ಜೀವನದಲ್ಲಿ ಎದುರಾಗುವ ಸಂಕಷ್ಟಗಳಿಗೆ ಆತ್ಮಹತ್ಯೆ ಅಂತಿಮ ನಿರ್ಧಾರವಲ್ಲ’ ಎಂಬುದನ್ನು ಆ ವ್ಯಕ್ತಿಗೆ ಮನವರಿಕೆ ಮಾಡಿಕೊಟ್ಟು, ಧೈರ್ಯ ತುಂಬಿದರು. ಬಳಿಕ ವ್ಯಕ್ತಿಯ ಕುಟುಂಬದವರನ್ನು ಸಂಪರ್ಕಿಸಿ, ನಡೆದ ಘಟನೆಯ ಬಗ್ಗೆ ವಿವರಿಸಿ, ಸುರಕ್ಷಿತವಾಗಿ ಕುಟುಂಬಸ್ಥರಿಗೆ ಒಪ್ಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.