ಬೆಂಗಳೂರು: ಚಂದಾಪುರ ಬಳಿಯ ಗುಂಜೂರಿನ ಡೀನ್ಸ್ ಅಕಾಡೆಮಿ ಬಳಿ ಶಾಲಾ ವಾಹನ ಹಾಗೂ ದ್ವಿಚಕ್ರ ವಾಹನದ ನಡುವೆ ಶುಕ್ರವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಸವಾರ ಚಿರಂಜೀವಿ (23) ಮೃತಪಟ್ಟಿದ್ದಾರೆ.

ರಸ್ತೆ ಕಾಮಗಾರಿಗಾಗಿ ಗುಂಡಿ ತೆಗೆಯಲಾಗಿತ್ತು. ಗುಂಡಿ ತಪ್ಪಿಸುವಾಗ ಶಾಲಾ ಬಸ್ವೊಂದು ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದಿದ್ದ ಸವಾರ ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಥಳೀಯರ ಆಕ್ರೋಶ: ಅಪಘಾತದ ದೃಶ್ಯವನ್ನು ಸಿವಿಕ್ ಅಸೋಸಿಯೇಷನ್ ಫೋರಂ ಸದಸ್ಯರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿ, ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕಿ ಮಂಜುಳಾ ಲಿಂಬಾವಳಿ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಖಾತೆಗೆ ಟ್ಯಾಗ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಈ ಭಾಗದ ರಸ್ತೆಯಲ್ಲಿ ಗುಂಡಿಗಳು ಬಿದ್ದು ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿವೆ. ಕಾಮಗಾರಿಗೆಂದು ರಸ್ತೆಯನ್ನು ಅಗೆದು ಹಾಗೆಯೇ ಬಿಡಲಾಗಿದೆ ಎಂದು ಸದಸ್ಯರು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.