ಬೆಂಗಳೂರು: ಮನೆಯನ್ನು ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮೂವರು ಮಹಿಳೆಯರು ಸೇರಿ ನಾಲ್ವರನ್ನು ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಸಿಬ್ಬಂದಿ ಬಂಧಿಸಿದ್ದಾರೆ. ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ.

ನಗರದ ಟಿ ದಾಸರಹಳ್ಳಿ, ಜರಗನಹಳ್ಳಿ ಮತ್ತು ಮೂಡಲಪಾಳ್ಯ ಪ್ರದೇಶಗಳಲ್ಲಿ ಬಾಡಿಗೆ ಮನೆಗಳಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ.

‘ಅಧಿಕ ಹಣ ಗಳಿಸುವ ಉದ್ದೇಶದಿಂದ, ವೇಶ್ಯಾವಾಟಿಕೆಯ ಸೇವೆಗಳನ್ನು ಬಯಸುವ ಪುರುಷ ರನ್ನು ದೂರವಾಣಿ ಮೂಲಕ ಸಂಪರ್ಕಿಸಲಾಗುತ್ತಿತ್ತು. ಬಾಡಿಗೆ ಮನೆಗಳಿಗೆ ಆಹ್ವಾನಿಸಿ, ಅಲ್ಲಿ ವೇಶ್ಯಾವಾಟಿಕೆ ಚಟುವಟಿಕೆಗಳನ್ನು ನಡೆಸಲಾಗುತ್ತಿತ್ತು ಎಂದು ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಬಾಗಲಗುಂಟೆ ಪೊಲೀಸ್ ಠಾಣೆ, ಪುಟ್ಟೇನಹಳ್ಳಿ ಪೊಲೀಸ್ ಠಾಣೆ ಮತ್ತು ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯೊಬ್ಬರು ತಲೆಮರೆ ಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-4-572597281

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.