ಬೆಂಗಳೂರು: ಡಾ.ರಾಜ್ಕುಮಾರ್ ಸಮಾಧಿ ಸ್ಥಳಕ್ಕೆ ಸರ್ಕಾರ ನೀಡಿದ್ದ ಜಾಗದ ವಿಚಾರವಾಗಿ ನಟ ಚೇತನ್ ನೀಡಿರುವ ಹೇಳಿಕೆ ಖಂಡಿಸಿ ‘ಅಖಿಲ ಕರ್ನಾಟಕ ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘ’ದ ಸದಸ್ಯರು, ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ರಾಜ್ಯದ ವಿವಿಧೆಡೆಗಳಿಂದ ಬಂದಿದ್ದ ಪ್ರತಿಭಟನಕಾರರು ಚೇತನ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. ‘ಅಣ್ಣಾವ್ರ ಬಗ್ಗೆ ಮಾತನಾಡಲು ನಿಮಗೆ ಎಷ್ಟು ಧೈರ್ಯ’ ಎಂದು ಆಕ್ರೋಶ ಹೊರ ಹಾಕಿದರು. ಚೇತನ್ ವಿರುದ್ಧ ಘೋಷಣೆ ಕೂಗಿದರು.

ಸಂಘದ ಅಧ್ಯಕ್ಷ ಸಾ.ರಾ. ಗೋವಿಂದು ಮಾತನಾಡಿ, ‘ಕನ್ನಡದ ಹೋರಾಟದಲ್ಲಿ ನಾನು ಯಾವತ್ತೂ ರಾಜಿ ಆಗಿಲ್ಲ. ಕನ್ನಡದ ಹೋರಾಟಕ್ಕೆ ಶಕ್ತಿ ಮತ್ತು ಸ್ಫೂರ್ತಿಯೇ ರಾಜ್ಕುಮಾರ್ ಅವರು. ಚೇತನ್ ನನ್ನ ವಿರುದ್ಧ ದೂರು ನೀಡಿದ್ದಾರೆ. ಅದಕ್ಕೆ ಹೆದರಿ ಹೋರಾಟ ಕೈಬಿಡುವ ಪ್ರಶ್ನೆಯೇ ಇಲ್ಲ. ಅಣ್ಣಾವ್ರ ಪರವಾಗಿ ಹೋರಾಡಿ ಜೈಲಿಗೆ ಹೋದೆ ಎಂಬ ಹೆಮ್ಮೆಯೂ ನನಗೆ ಇರುತ್ತದೆ’ ಎಂದು ಹೇಳಿದರು. ನಿರ್ಮಾಪಕ ಎಂ.ನರಸಿಂಹಲು, ಎನ್.ಎಂ. ಸುರೇಶ್ ಸೇರಿದಂತೆ ಹಲವು ಗಣ್ಯರು ಭಾಗಿ ಆಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-4-1489982969

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.