ಬೆಂಗಳೂರು: ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೊಳಿಸುವುದು, ರೋಸ್ಟರ್ ಬಿಂದು ಸಮಸ್ಯೆ ಸರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮೇ 27ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಮಾದಿಗ ಸಂಘಟನೆಗಳ ಒಕ್ಕೂಟ ತಿಳಿಸಿದೆ.

ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಮುಖಂಡರಾದ ಕೇಶವಮೂರ್ತಿ, ಭೀಮ್ರಾಜ್, ದೇವರಾಜ್ ಕೈವಾರ, ಕೆ. ಕೃಷ್ಣಪ್ಪ, ಹುಸೇನಪ್ಪ ಮಾದರ್, ಬಿ.ಆರ್. ಮುನಿರಾಜ್ ಮಾತನಾಡಿದರು.

‘ಪರಿಶಿಷ್ಟ ಜಾತಿ ಒಳ ಮೀಸಲಾತಿಗೆ ಸಂಬಂಧಿಸಿ ದಂತೆ ಎಚ್.ಎನ್. ನಾಗಮೋಹನದಾಸ್ ಆಯೋಗ ಹಾಗೂ ಜೆ.ಸಿ. ಮಾಧುಸ್ವಾಮಿ ಸಮಿತಿ ವರದಿಗಳನ್ನು ರಾಜ್ಯ ಸರ್ಕಾರ ತಳ್ಳಿ ಹಾಕಿದೆ. ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದು ಮೇ 8ರಂದು ಹೊರಡಿಸಿರುವ ಆದೇಶವೂ ಕಾನೂನುಬಾಹಿರವಾಗಿದ್ದು, ಅವೈಜ್ಞಾನಿಕ ಹಾಗೂ ಗೊಂದಲದಿಂದ ಕೂಡಿದೆ’ ಎಂದು ಆರೋಪಿಸಿದರು.

‘ಪರಿಶಿಷ್ಟ ಜಾತಿಯ ಒಳ ಮೀಸಲಾತಿಯನ್ನು ಎಲ್ಲ ಕ್ಷೇತ್ರಗಳಲ್ಲಿ ಅನ್ವಯಿಸುವಂತೆ ಜಾರಿಗೊಳಿಸಬೇಕು. ಮಾದಿಗ ಸಮುದಾಯದ ಜನಸಂಖ್ಯೆಗೆ ಅನುಗುಣ ವಾಗಿ ಶೇ 6ರಷ್ಟು ಒಳ ಮೀಸಲಾತಿ ಒದಗಿಸಬೇಕು. ವಿವಿಧ ಇಲಾಖೆಗಳ ನೌಕರರಿಗೆ ಬಡ್ತಿಯಲ್ಲಿ ಹಾಗೂ ಮುಂಬಡ್ತಿಯಲ್ಲೂ ಒಳ ಮೀಸಲಾತಿ ಜಾರಿಗೊಳಿಸಬೇಕು’ ಎಂದು ಒತ್ತಾಯಿಸಿದರು.

‘ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ಸಿಎಸ್ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಯ (ಟಿಎಸ್ಪಿ) ಅನುದಾನವನ್ನು ಒಳ ಮೀಸಲಾತಿ ಅನ್ವ ಯಿಸಿ ಹಂಚಿಕೆ ಮಾಡಬೇಕು’ ಎಂದು ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-4-929841526

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.