ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಅತಿ ಹಿಂದುಳಿದ ಮಠಾಧೀಶರ ಪ್ರತಿಭಟನೆ

Published 31 ಜನವರಿ 2024, 16:08 IST
Last Updated 31 ಜನವರಿ 2024, 16:08 IST
ಅಕ್ಷರ ಗಾತ್ರ

ಬೆಂಗಳೂರು: ‘ಎಚ್‌. ಕಾಂತರಾಜ ಆಯೋಗದ ವರದಿ ಜಾರಿಗೊಳಿಸಬೇಕು’ ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿ ಹಿಂದುಳಿದ ಮಠಾಧೀಶರ ಮಹಾಸಭಾದಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿದ್ದ ಮಠಾಧೀಶರು, ಬೇಡಿಕೆ ಈಡೇರಿಕೆಗಾಗಿ ಘೋಷಣೆ ಕೂಗಿದರು.

‘ಅತಿ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಸ್ಥಾಪಿಸಿರುವ ಎಲ್ಲ ನಿಗಮಗಳಿಗೆ ತಲಾ ₹ 500 ಕೋಟಿ ಅನುದಾನ ಬಿಡುಗಡೆ ಮಾಡಬೇಕು. ಸಮಾಜದ ಜನರ ಕುಲ ಕಸುಬುಗಳನ್ನು ರಕ್ಷಣೆ ಮಾಡಿ, ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು’ ಎಂದು ಮಠಾಧೀಶರು ಒತ್ತಾಯಿಸಿದರು.

ಪ್ರಣವಾನಂದ ಸ್ವಾಮೀಜಿ, ಬಸವ ನಾಗಿದೇವ ಶರಣ, ಸಂಗಮಾನಂದ ಸ್ವಾಮೀಜಿ, ದೊಡ್ಡೆಂದ್ರ ಸ್ವಾಮೀಜಿ, ವರಲಿಂಗ ಸ್ವಾಮೀಜಿ ಪ್ರತಿಭಟನೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT