ಬೆಂಗಳೂರು: ಮಳೆ-ಗಾಳಿಗೆ ಬಿದ್ದಿರುವ ಮರಗಳು ಹಾಗೂ ರೆಂಬೆ-ಕೊಂಬೆ ತೆರವು ಕಾರ್ಯಾಚರಣೆ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಂದುವರಿದಿದ್ದು, ಈವರೆಗೂ 136 ಮರ, 264 ರೆಂಬೆ– ಕೊಂಬೆ ತೆರವುಗೊಳಿಸಲಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಎರಡು ವಾರದಲ್ಲಿ ಮಳೆ- ಗಾಳಿಗೆ 136 ಮರಗಳು ಹಾಗೂ 269 ರೆಂಬೆ-ಕೊಂಬೆಗಳು ಬಿದ್ದಿದ್ದವು. ರಸ್ತೆಯಲ್ಲಿ ಬಿದ್ದ ಮರ, ರೆಂಬೆ- ಕೊಂಬೆಗಳನ್ನು ಕತ್ತರಿಸಿ ರಸ್ತೆ ಪಕ್ಕದಲ್ಲಿ ಹಾಕಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿತ್ತು. ನಂತರ, ಆದ್ಯತೆ ಮೇರೆಗೆ ಎಲ್ಲ ಮರ, ರೆಂಬೆ-ಕೊಂಬೆಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಕೇಂದ್ರ ನಗರ ಪಾಲಿಕೆ ಹೆಚ್ಚುವರಿ ಆಯುಕ್ತ ದಲ್ಜಿತ್ ಕುಮಾರ್ ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಅಪಾಯಕಾರಿ ಮರ, ರೆಂಬೆ-ಕೊಂಬೆಗಳು ಕಂಡುಬಂದಲ್ಲಿ ಅವುಗಳನ್ನು ತೆರವುಗೊಳಿಸಲಾಗುವುದು. ಈ ಬಗ್ಗೆ ಪಾಲಿಕೆ ಅರಣ್ಯ ವಿಭಾಗದ ಅಧಿಕಾರಿಗಳು ಇಲ್ಲವೇ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಿ ದೂರು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-4-158613738

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.