ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Bengaluru Rains: ನೀರು ತುಂಬಿದ ರಸ್ತೆಯಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

Last Updated 5 ಸೆಪ್ಟೆಂಬರ್ 2022, 5:02 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಭಾರಿ ಮಳೆ ಅವಾಂತರ ಸೃಷ್ಟಿಸಿದೆ.

ರಸ್ತೆಗಳು ಜಲಾವೃತಗೊಂಡಿದ್ದು, ನಗರದೆಲ್ಲೆಡೆ ಸೋಮವಾರ ಬೆಳಿಗ್ಗೆ ವಿಪರೀತ ಸಂಚಾರ ದಟ್ಟಣೆ ಕಂಡುಬಂದಿದೆ.

ಈ ನಡುವೆ ಮಾರತಹಳ್ಳಿ ಹಾಗೂ ಸಿಲ್ಕ್ ಬೋರ್ಡ್ ಜಂಕ್ಷನ್ ರಸ್ತೆಯ ಸಮೀಪ ಜಲಾವೃತಗೊಂಡ ರಸ್ತೆಯಲ್ಲಿ ಸಿಲುಕಿದ್ದ ವ್ಯಕ್ತಿಯೊಬ್ಬರನ್ನು ಸೆಕ್ಯೂರಿಟಿ ಗಾರ್ಡ್ ರಕ್ಷಿಸಿದ್ದಾರೆ.

ಸುದ್ದಿಸಂಸ್ಥೆ 'ಎಎನ್‌ಐ' ಈ ಕುರಿತು ವಿಡಿಯೊ ಪೋಸ್ಟ್ ಮಾಡಿದೆ.

ಬೆಂಗಳೂರಿನ ಕಾಲುವೆಗಳಲ್ಲಿ ನೀರು ತುಂಬಿ ರಸ್ತೆಗಳ ಮೇಲೆಯೇ ನೀರು ಹೊಳೆಯಂತೆ ಹರಿಯುತ್ತಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

ಬೆಂಗಳೂರಿನ ಹೊರ ವರ್ತುಲ ರಸ್ತೆಯ ಇಕೋಸ್ಪೇಸ್ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿದ್ದರಿಂದ ಸಂಚಾರ ದಟ್ಟಣೆ ಕಂಡುಬಂದಿದೆ.

ಹೊರ ವರ್ತುಲ ರಸ್ತೆ, ಸರ್ಜಾಪುರ ರಸ್ತೆ, ದೊಡ್ಡಕನ್ನಹಳ್ಳಿ ಮತ್ತು ಬೆಳ್ಳಂದೂರು ರಸ್ತೆಯಲ್ಲಿ ಸಂಚರಿಸುವ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಲು ಸಂಚಾರ ಪೊಲೀಸರು ಪ್ರಮಾಣಿಕರಿಗೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT