ಶನಿವಾರ, ನವೆಂಬರ್ 28, 2020
17 °C

ನಗರದ ಕೆಲವೆಡೆ ಜೋರು ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದ ಕೆಲವೆಡೆ ಶುಕ್ರವಾರ ರಾತ್ರಿ ಜೋರು ಮಳೆಯಾಗಿದ್ದು, ಹಲವೆಡೆ ಜಿಟಿ ಜಿಟಿ ಮಳೆ ಸುರಿದಿದೆ.

ಬೆಳಿಗ್ಗೆಯಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬಂತು. ಅಲ್ಲಲ್ಲಿ ಜಿಟಿ ಜಿಟಿಯಾಗಿ ಮಳೆಯೂ ಸುರಿಯಿತು. ಸಂಜೆ ವೇಳೆ ಕೆಲವೆಡೆ ಮಳೆ ಅಬ್ಬರ ಜೋರಾಗಿತ್ತು.

ಮಲ್ಲೇಶ್ವರ, ಸದಾಶಿವನಗರ, ಸುಬ್ರಹ್ಮಣ್ಯನಗರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಪ್ರಮಾಣ ಹೆಚ್ಚಿತ್ತು. ರಾಜಾಜಿನಗರ, ಬಸವೇಶ್ವರನಗರ, ವಿಜಯನಗರ, ರಾಜರಾಜೇಶ್ವರಿನಗರ, ಯಶವಂತಪುರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಇತ್ತು.

‘ಕೆಲವೆಡೆ ಮಾತ್ರ ಮಳೆಯಾಗಿದ್ದು, ರಸ್ತೆಯಲ್ಲಿ ನೀರು ನಿಂತಿತ್ತು. ಮಳೆ ನಿಂತ ನಂತರ ನೀರು ಖಾಲಿಯಾಗಿದೆ.
ಮರ ಬಿದ್ದ ಹಾಗೂ ಮಳೆಯಿಂದ ಹಾನಿಯಾದ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು