ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಮಳೆ: ಹೊಳೆಯಂತಾದ ರಸ್ತೆ

Last Updated 5 ಮೇ 2022, 3:23 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ವಿವಿಧೆಡೆ ಬುಧವಾರವೂ ಜೋರು ಮಳೆ ಸುರಿಯಿತು. ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಬಿಸಿಲಿನ ವಾತಾವರಣ ಇತ್ತು. ಸಂಜೆ ವೇಳೆಗೆ ಆಗಸದಲ್ಲಿ ಕಾರ್ಮೋಡ ದಟ್ಟೈಸಿತ್ತು. ಬಳಿಕ ಧಾರಾಕಾರ ಮಳೆಯಾಗಿದ್ದರಿಂದ ರಸ್ತೆಗಳು ಹೊಳೆಯಂತಾಗಿದ್ದವು.

ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆ ಸುರಿಯಿತು. ದಿಢೀರ್‌ ಮಳೆಯಿಂದಾಗಿ ಚಳಿಯ ಅನುಭವವೂ ಆಯಿತು.

ಮೈಸೂರು ಮತ್ತು ಮಾಗಡಿ ರಸ್ತೆ, ಜೆ.ಸಿ.ನಗರದಲ್ಲಿರುವ ದೂರ ದರ್ಶನ ಕೇಂದ್ರ, ಸಂಜಯನಗರ, ಗಂಗಾನಗರ, ಆರ್‌.ಟಿ.ನಗರ, ಹೆಬ್ಬಾಳ, ಚಾಮರಾಜಪೇಟೆ, ಕೆ.ಆರ್‌.ಮಾರುಕಟ್ಟೆ, ವಿಜಯನಗರ, ನಾಯಂಡಹಳ್ಳಿ, ಕೆಂಗೇರಿ, ಬ್ಯಾಟರಾಯನಪುರ, ಗಿರಿನಗರ, ಹೊಸಕೆರೆಹಳ್ಳಿ, ಶ್ರೀನಿವಾಸನಗರ, ಕತ್ರಿಗುಪ್ಪೆ, ಹನುಮಂತ ನಗರ, ರಾಜರಾಜೇಶ್ವರಿ ನಗರ, ದಾಸರಹಳ್ಳಿ, ಮಲ್ಲೇಶ್ವರ, ಮಹಾಲಕ್ಷ್ಮಿ ಬಡಾವಣೆ, ಎಂ.ಜಿ.ರಸ್ತೆ, ಇಂದಿರಾನಗರ, ಬ್ರಿಗೇಡ್‌ ರಸ್ತೆ, ಹಲಸೂರು, ಜೀವನ್‌ಬಿಮಾ ನಗರ, ಕೋರಮಂಗಲ, ಎಚ್‌ಎಸ್‌ಆರ್‌ ಬಡಾವಣೆ ಸೇರಿದಂತೆ ಹಲವೆಡೆ ಧಾರಾಕಾರಮಳೆಯಾಯಿತು. ಕೆಲವೆಡೆ ಸಂಚಾರ ದಟ್ಟಣೆಯೂ ಉಂಟಾಯಿತು.

ಶಾಂತಿನಗರ, ಮೆಜೆಸ್ಟಿಕ್‌, ಕಾರ್ಪೊರೇಷನ್‌ ವೃತ್ತ, ಕೆ.ಆರ್‌.ವೃತ್ತ, ಮೈಸೂರು ಬ್ಯಾಂಕ್‌ ವೃತ್ತ ಸೇರಿದಂತೆ ವಿವಿಧೆಡೆ ತಗ್ಗು ಪ್ರದೇಶಗಳಲ್ಲಿ ನೀರು ಸಂಗ್ರಹಣೆಯಾಗಿತ್ತು. ನಗರದ ಹಲವೆಡೆ ನೆಲದಡಿಯಲ್ಲಿ ವಿದ್ಯುತ್‌ ಕೇಬಲ್‌ ಅಳವಡಿಕೆ ಹಾಗೂ ಮೆಟ್ರೊ ಕಾಮಗಾರಿ ಪ್ರಗತಿಯಲ್ಲಿದ್ದು, ಇದಕ್ಕಾಗಿ ಅಗೆಯಲಾಗಿದ್ದ ಗುಂಡಿಗಳಲ್ಲೂಮಳೆನೀರು ಸಂಗ್ರಹವಾಗಿತ್ತು. ಅಲ್ಲಲ್ಲಿ ರಾಶಿ ಹಾಕಿದ್ದ ಮಣ್ಣು
ಮಳೆಗೆ ಕೊಚ್ಚಿಕೊಂಡು ರಸ್ತೆ ಮೇಲೆಹರಡಿಕೊಂಡಿತ್ತು. ಆ ಮಾರ್ಗದಲ್ಲಿ ಸಾಗುವವರಿಗೆ ಕೆಸರಿನ ಸಿಂಚನವಾಯಿತು.

ಜೆ.ಪಿ.ನಗರ 7ನೇ ಹಂತದಲ್ಲಿರುವ (ಪುಟ್ಟೇನಹಳ್ಳಿ) ಜಿನ ಮಂದಿರ ಆವರಣದಲ್ಲಿ ಮಳೆ ನೀರು ಸಂಗ್ರಹವಾಗಿತ್ತು. ಕೆ.ಆರ್‌.ಮಾರುಕಟ್ಟೆ, ಅವೆನ್ಯೂ ರಸ್ತೆ ಸೇರಿ ಪ್ರಮುಖ ಮಾರುಕಟ್ಟೆಗಳಲ್ಲಿನ ವರ್ತಕರು ಹಾಗೂ ಬೀದಿಬದಿ ವ್ಯಾಪಾರಿಗಳು ಸಂಕಷ್ಟ ಅನುಭವಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT