ಬೆಂಗಳೂರು: ರಾಜಾಜಿನಗರ ಎರಡನೇ ಹಂತದ ‘ಡಿ’ ಬ್ಲಾಕ್ನ ಮನೆಯೊಂದರಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಸವಿತಾ (55) ಮೃತಪಟ್ಟವರು.

ಸವಿತಾ ಅವರ ಪತಿ ಡಿ.ಆರ್.ರಮೇಶ್ ಬಾಬು, ಪುತ್ರ ವಿಶ್ರುತ್ ಹಾಗೂ ರಮೇಶ್ ಅವರ ತಾಯಿ ಸಣ್ಣಮ್ಮ ಅವರು ಪಾರಾಗಿದ್ದಾರೆ. ಸೋಮವಾರ ರಾತ್ರಿ 9 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

‘ರಮೇಶ್ ಬಾಬು ಅವರು ಗುತ್ತಿಗೆ ಕೆಲಸ ಮಾಡುತ್ತಿದ್ದಾರೆ. ರಾಜಾಜಿನಗರದ ‘ಡಿ’ ಬ್ಲಾಕ್ನಲ್ಲಿ ರಮೇಶ್ ಅವರಿಗೆ ಸೇರಿದ ನಾಲ್ಕು ಅಂತಸ್ತಿನ ಮನೆಯಿದೆ. ಮನೆಯ ಮೊದಲ ಹಾಗೂ ಎರಡನೇ ಅಂತಸ್ತನ್ನು ಬಾಡಿಗೆಗೆ ಕೊಟ್ಟಿದ್ದರು. ಮೂರು ಮತ್ತು ನಾಲ್ಕನೇ ಅಂತಸ್ತಿನಲ್ಲಿ ರಮೇಶ್ ಬಾಬು ಅವರು ತಾಯಿ, ಪತ್ನಿ ಹಾಗೂ ಪುತ್ರನ ಜತೆಗೆ ನೆಲಸಿದ್ದರು. ಅಡುಗೆಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಸವಿತಾ ಬೆಂಕಿಗೆ ಸಿಲುಕಿ ಮೃತಪಟ್ಟಿದ್ದಾರೆ’ ಎಂದು ಮೂಲಗಳು ಹೇಳಿವೆ.

‘ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿ ಮೂವರನ್ನು ರಕ್ಷಿಸಲಾಯಿತು’ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಮಲ್ಲೇಶ್ವರ ಉಪ ವಿಭಾಗದ ಎಸಿಪಿ ಹಾಗೂ ಸುಬ್ರಮಣ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.