ಬೆಂಗಳೂರು: ಪರಿಷ್ಕೃತ ಮಾಸ್ಟರ್ ಪ್ಲಾನ್ 2015ಕ್ಕೆ ತಿದ್ದುಪಡಿ ಮಾಡುವ ಮೂಲಕ ಬೆಂಗಳೂರು ಮಹಾನಗರದಲ್ಲಿನ ರಾಜಕಾಲುವೆಗಳ ಆಜುಬಾಜಿನ ಬಫರ್ ವಲಯ ಕುಗ್ಗಿಸಿರುವುದನ್ನು ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಕುರಿತಂತೆ ‘ಜನಾಧಿಕಾರ ಸಂಘರ್ಷ ಪರಿಷತ್’ ಸಹ ಅಧ್ಯಕ್ಷ ಆದರ್ಶ್ ಆರ್. ಅಯ್ಯರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಜಿಬಿಎ ಮತ್ತು ಬಿಡಿಎ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಿತು. ಅರ್ಜಿದಾರರ ಪರ ಹೈಕೋರ್ಟ್ ವಕೀಲೆ ಸುಮನ ಹೆಗ್ಡೆ ವಕಾಲತ್ತು ವಹಿಸಿದ್ದಾರೆ.

ಅರ್ಜಿಯಲ್ಲಿ ಏನಿದೆ?: ‘ಪರಿಷ್ಕತ ಮಾಸ್ಟರ್ ಪ್ಲಾನ್–2015 ಅನ್ನು ತಿದ್ದುಪಡಿ ಮಾಡುವ ಮೂಲಕ ರಾಜ್ಯ ಸರ್ಕಾರ, ಬೆಂಗಳೂರು ಮಹಾನಗರ ವ್ಯಾಪ್ತಿಯ ರಾಜಕಾಲುವೆಗಳ ಬಫರ್ ವಲಯಗಳನ್ನು ಗಣನೀಯವಾಗಿ ಕುಗ್ಗಿಸಿ ಅಧಿಸೂಚನೆ ಹೊರಡಿಸಿದೆ. ಇದರ ಪರಿಣಾಮವಾಗಿ ಪ್ರತಿ ಬಾರಿ ಮಳೆ ಸುರಿದಾಗಲೆಲ್ಲಾ ಭಾರಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇದು ಜೀವಗಳು ಮತ್ತು ಆಸ್ತಿ ಪಾಸ್ತಿಗಳ ಹಾನಿಗೆ ಕಾರಣವಾಗುತ್ತಿದೆ’ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

‘ಬೆಂಗಳೂರು ಮಹಾ ನಗರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಲು ಕಾರಣವೇನು ಎಂಬುದನ್ನು 2021ರ ಸಿಎಜಿ ವರದಿಯಲ್ಲೂ ಉಲ್ಲೇಖಿಸ ಲಾಗಿದೆ. ಬಿಬಿಎಂಪಿ ಅವಧಿಯಲ್ಲಿ ಮಳೆ ನೀರು ಕಾಲುವೆಗಳನ್ನು ಮತ್ತು ರಾಜಕಾಲುವೆಗಳ ಸುತ್ತಮುತ್ತಲ ಬಫರ್ ವಲಯಗಳನ್ನೂ ಸರಿಯಾಗಿ ಗುರುತಿಸಿಲ್ಲ. ಸುಮಾರು 2,600 ರಾಜಕಾಲುವೆ ಒತ್ತುವರಿಗಳನ್ನು ಗುರುತಿಸಿದ್ದರೂ ಅವುಗಳಲ್ಲಿ ಕೇವಲ ನೂರು ಕಾಲುವೆಗಳನ್ನು ಮಾತ್ರವೇ ತೆರವುಗೊಳಿಸಲಾಗಿದೆ. ಚರಂಡಿಗಳಿಗೆ ಹೊಂದಿಕೊಂಡಂತೆ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ’ ಎಂದು ದೂರಲಾಗಿದೆ.

‘ಬಫರ್ ವಲಯ ಕುಗ್ಗಿಸಿರುವ ಬಗ್ಗೆ 2025ರ ಸೆಪ್ಟೆಂಬರ್ 30ರಂದು ಕರಡು ಅಧಿಸೂಚನೆ ಹೊರಡಿಸಲಾಗಿದೆ. ಈ ಅಧಿಸೂಚನೆ ನಿರ್ಧಾರ ಪರಿಸರ ಕಾನೂನು ಮತ್ತು ನಿಯಮಗಳಿಗೆ ವಿರುದ್ಧವಾಗಿದೆ. ಅಷ್ಟೇ ಅಲ್ಲದೆ ಈ ನಿರ್ಧಾರ ಖಾಸಗಿ ರಿಯಲ್ ಎಸ್ಟೇಟ್ ವಲಯದ ಅಭಿವೃದ್ಧಿಗೆ ನೆರವು ನೀಡಿದಂತಾಗಿದೆ. ಆದ್ದರಿಂದ, ಬೆಂಗಳೂರು ಮೆಟ್ರೊ ಪ್ರದೇಶ ವ್ಯಾಪ್ತಿಯಲ್ಲಿರುವ ಪ್ರಾಥಮಿಕ, ದ್ವಿತೀಯ ಹಾಗೂ ಮೂರನೇ ಹಂತದ ಬಫರ್ ವಲಯಗಳ ಸುತ್ತಲಿನ ಗಡಿಯನ್ನು ತಕ್ಷಣವೇ ಗುರುತಿಸಲು ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಮತ್ತು ಬಿಡಿಎಗೆ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ನಿರ್ದೇಶಿಸಬೇಕು. ಈ ಸಂಬಂಧ ನಗರಾಭಿವೃದ್ಧಿ ಇಲಾಖೆ 2025ರ ಅಕ್ಟೋಬರ್ 15ರಂದು ಹೊರಡಿಸಿರುವ ಅಂತಿಮ ಅಧಿಸೂಚನೆಯನ್ನು ರದ್ದುಗೊಳಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-4-5402864

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.