ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ: ಶಂಕಿತರು ಪುನಃ ಎನ್‌ಐಎ ಕಸ್ಟಡಿಗೆ

Published 22 ಏಪ್ರಿಲ್ 2024, 16:06 IST
Last Updated 22 ಏಪ್ರಿಲ್ 2024, 16:06 IST
ಅಕ್ಷರ ಗಾತ್ರ

ಬೆಂಗಳೂರು: ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಾದ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ಅಹಮದ್ ತಾಹಾನನ್ನು ಹೆಚ್ಚಿನ ವಿಚಾರಣೆಗಾಗಿ ಪುನಃ ಏಪ್ರಿಲ್ 29ರವರೆಗೆ ಎನ್‌ಐಎ ಕಸ್ಟಡಿಗೆ ನೀಡಲಾಗಿದೆ.

ಮಾರ್ಚ್ 1ರಂದು ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಇಬ್ಬರನ್ನೂ ಏಪ್ರಿಲ್ 12ರಂದು ಬಂಧಿಸಲಾಗಿತ್ತು. ನಂತರ, ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗಾಗಿ ಏಪ್ರಿಲ್ 22ರವರೆಗೆ ಕಸ್ಟಡಿಗೆ ಪಡೆಯಲಾಗಿತ್ತು.

ಕಸ್ಟಡಿ ಅವಧಿ ಮುಗಿದಿದ್ದರಿಂದ ಇಬ್ಬರನ್ನೂ ನ್ಯಾಯಾಧೀಶರ ಎದುರು ಸೋಮವಾರ ಹಾಜರುಪಡಿಸಲಾಯಿತು.

‘ಸ್ಫೋಟ ಹಾಗೂ ಸಂಚಿನ ಬಗ್ಗೆ ಶಂಕಿತರು ಹಲವು ಮಾಹಿತಿ ನೀಡಿದ್ದಾರೆ. ಅವುಗಳ ಪರಿಶೀಲನೆ ನಡೆಯುತ್ತಿದೆ. ಜೊತೆಗೆ, ಇದು ದೇಶದ ಭದ್ರತೆಗೆ ಸಂಬಂಧಪಟ್ಟ ಪ್ರಕರಣ. ಶಂಕಿತರು ಮತ್ತಷ್ಟು ಕಡೆಗಳಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿರುವ ಮಾಹಿತಿ ಇದೆ. ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಬೇಕಿದ್ದು, ಇಬ್ಬರನ್ನೂ ಪುನಃ ಕಸ್ಟಡಿಗೆ ನೀಡಬೇಕು’ ಎಂದು ಎನ್ಐಎ ಅಧಿಕಾರಿಗಳು ಕೋರಿದರು.

ಮನವಿ ಪುರಸ್ಕರಿಸಿದ ನ್ಯಾಯಾಧೀಶರು, ಶಂಕಿತರನ್ನು ಎನ್‌ಐಎ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT