ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮದಲ್ಲಿ ನಷ್ಟಕ್ಕೆ ಒಳಗಾಗಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ಆ ಪೈಕಿ ತಂದೆ ಹಾಗೂ ಮಗ ಮೃತಪಟ್ಟಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯ ಹೆಗ್ಗ ನಹಳ್ಳಿಯಲ್ಲಿ ಗುರುವಾರ ರಾತ್ರಿ ನಡೆದಿದೆ.

ತಂದೆ ಕುಮಾರಪ್ಪ (60) ಹಾಗೂ ಅವರ ಪುತ್ರ ಅರುಣ್ ಕುಮಾರ್ (30) ಮೃತಪಟ್ಟಿದ್ದಾರೆ. ಕುಮಾರಪ್ಪ ಅವರ ಪತ್ನಿ ರಮಾ (55) ಹಾಗೂ ಅಕ್ಷಯ್ ಕುಮಾರ್ (25) ಅವರ ಸ್ಥಿತಿ ಗಂಭೀರವಾಗಿದ್ದು ಹೆಬ್ಬಾಳದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಅರುಣ್ ನೇಣು ಹಾಕಿಕೊಂಡಿದ್ದರೆ, ಉಳಿದ ಮೂವರು ವಿಷ ಕುಡಿದಿದ್ದರು ಎಂದು ಪೊಲೀಸರು ಹೇಳಿದರು.

ಸ್ಥಳಕ್ಕೆ ಚಿಕ್ಕಜಾಲ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಮರಣೋತ್ತರ ಪರೀಕ್ಷೆ ನಡೆಸಲು ಮೃತದೇಹಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಕುಮಾರ್ ಅವರು ದೇವನಹಳ್ಳಿ ತಾಲ್ಲೂಕಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದರು. ಉದ್ಯಮದಲ್ಲಿ ನಷ್ಟಕ್ಕೆ ಒಳಗಾಗಿದ್ದರು. ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಮೂಲಗಳು ಹೇಳಿವೆ.

ಘಟನೆ ನಡೆದ ಮನೆಯಲ್ಲಿ ಮದ್ಯದ ಹಾಗೂ ವಿಷದ ಬಾಟಲಿಗಳು ಪತ್ತೆಯಾಗಿವೆ. ಅವುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.