ಬೆಂಗಳೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೇಂಟರ್ ಮೃತಪಟ್ಟಿರುವ ಘಟನೆ ವಿಲ್ಸನ್ ಗಾರ್ಡನ್ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೈಲಸಂದ್ರ ನಿವಾಸಿ ನಾಗರಾಜು(40) ಮೃತ ಪೇಂಟರ್.

ಕೆಲಸದ ನಿಮಿತ್ತ ಹೊರಗಡೆ ಹೋಗಿದ್ದ ನಾಗರಾಜು, ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಬೈಲಸಂದ್ರ ಮುಖ್ಯರಸ್ತೆಯಲ್ಲಿ ನಡೆದುಕೊಂಡು ಮನೆಗೆ ಹೋಗುತ್ತಿದ್ದರು. ಇದೇ ವೇಳೆ ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದಿದ್ದು, ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ.

ತೀವ್ರ ರಕ್ತಸ್ರಾವವಾಗಿ ಕೆಳಗೆ ಬಿದ್ದಿದ್ದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮುಂಜಾನೆ 3 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ. ವಿಲ್ಸನ್ ಗಾರ್ಡನ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾಹನ ಪತ್ತೆ ಕಾರ್ಯ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.