ಬೆಂಗಳೂರು: ಹೆಣ್ಣೂರು–ಬಾಗಲೂರು ಮುಖ್ಯರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಶುಕ್ರವಾರ ಮೃತಪಟ್ಟಿದ್ದಾನೆ.

ವರುಣ್(15) ಮೃತಪಟ್ಟ ವಿದ್ಯಾರ್ಥಿ. ಘಟನೆಯ ಸಂಬಂಧ ಬಸ್ ಚಾಲಕ ಇಮ್ರಾನ್ ಖಾನ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವರುಣ್, ನೀರು ತರಲೆಂದು ಗೆದ್ದಲಹಳ್ಳಿ ಹೋಟೆಲ್ ಎದುರು ಶುಕ್ರವಾರ ಬೆಳಿಗ್ಗೆ 11.30ರ ಸುಮಾರಿಗೆ ನಡೆದುಕೊ೦ಡು ಹೋಗುತ್ತಿದ್ದ. ಹೆಣ್ಣೂರು–ಬಾಗಲೂರು ಮುಖ್ಯರಸ್ತೆ ದಾಟುತ್ತಿದ್ದಾಗ ಹೆಣ್ಣೂರು ಕಡೆಯಿಂದ ಬಂದ ಖಾಸಗಿ ಬಸ್, ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಮೃತಪಟ್ಟಿದ್ದಾನೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಹೆಣ್ಣೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ತಡೆ ನಡೆಸಿ ಪ್ರತಿಭಟನೆ: ಘಟನೆ ಸಂಬಂಧ ಆಕ್ರೋಶ ವ್ಯಕ್ತಪಡಿಸಿರುವ ಕುಟುಂಬಸ್ಥರು ಹಾಗೂ ಸ್ಥಳೀಯರು ಹೆಣ್ಣೂರು–ಬಾಗಲೂರು ಮುಖ್ಯರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದರು. ರಸ್ತೆತಡೆ ಹಿನ್ನೆಲೆಯಲ್ಲಿ ಬಾಗಲೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.

ವೈಟ್ ಟಾಪಿಂಗ್ ಕಾಮಗಾರಿಯನ್ನು ನಿಧಾನವಾಗಿ ನಡೆಸಲಾಗುತ್ತಿದ್ದು, ಇದರಿಂದಲೇ ರಸ್ತೆ ಅಪಘಾತವಾಗಿದೆ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.